ಗುರುಗ್ರಾಮ : ಪೂರ್ವ ಜರ್ಮನಿ ಮತ್ತು ಪಶ್ಚಿಮ ಜರ್ಮನಿಯ ಏಕೀಕರಣದಂತೆಯೇ, ಭಾರತದೊಂದಿಗೆ ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ವಿಲೀನವೂ ಸಾಧ್ಯ ಎಂದು ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.
ಗುರುಗ್ರಾಮದಲ್ಲಿ ಬಿಜೆಪಿಯ ರಾಷ್ಟ್ರೀಯ ಅಲ್ಪಸಂಖ್ಯಾತ ಮೋರ್ಚಾದ ಮೂರು ದಿನಗಳ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, 1947ರಲ್ಲಿ ನಡೆದ ದೇಶದ ವಿಭಜನೆ ಕುರಿತು ನೋವಿನ ಮಾತುಗಳನ್ನು ಆಡಿದರು.
ಭಾರತವು ತನ್ನ ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧವನ್ನು ಬಯಸುತ್ತದೆ ಎಂದು ಒತ್ತಿ ಹೇಳಿದರು.