ಲಕ್ನೋ : ಭಾರತವು ಹೊಸ ಪ್ರಯಾಣ ಆರಂಭಿಸಿದೆ. ಆದರೆ ಪಾಕಿಸ್ತಾನವು ಹಸಿವಿನಿಂದ ಬಳಲುತ್ತಿದೆ. ಪಾಕಿಸ್ತಾನ ತನ್ನ ಪಾಪಗಳಿಗೆ ತಕ್ಕ ಶಿಕ್ಷೆ ಅನುಭವಿಸುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟೀಕಿಸಿದ್ದಾರೆ.
ಅಂಬೇಡ್ಕರ್ನಗರದಲ್ಲಿ 1,212 ಕೋಟಿ ರೂ. ವೆಚ್ಚದ 2,339 ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರ ಒಂಭತ್ತು ವರ್ಷಗಳ ಆಡಳಿತ ಭಾರತದ ಇತಿಹಾಸದಲ್ಲಿ ಅದ್ವಿತೀಯ.
ಕಾಶ್ಮೀರದಲ್ಲಿ 370 ನೇ ವಿಧಿ ರದ್ದುಗೊಳಿಸಿದ್ದನ್ನು ಯಾರಿಂದಲೂ ಊಹಿಸುವುದಕ್ಕೂ ಸಾಧ್ಯವಿಲ್ಲ. ಆದರೆ ಪ್ರಧಾನಿ, ಸಚಿವರು ಅದನ್ನು ಸಾಕಾರಗೊಳಿಸಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನೆಲೆಸಿರುವ ಜನರು ಕೂಡ ಪಾಕಿಸ್ತಾನದ ದಯನೀಯ ಪರಿಸ್ಥಿತಿಗೆ ಅಲ್ಲಿನ ಸರ್ಕಾರವನ್ನು ದೂಷಿಸುತ್ತಿದ್ದಾರೆ ಎಂದು ಹೇಳಿದ್ದಾರೆ.