ನವದೆಹಲಿ : ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭೂಟ್ಟೊ ಜರ್ದಾರಿ ಅವರು ಗೋವಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆಯ ವಿದೇಶಾಂಗ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ಮೇ ತಿಂಗಳಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ.
ಜರ್ದಾರಿ ಅವರು ಮೇ 4 ಹಾಗೂ 5 ರಂದು ಗೋವಾದಲ್ಲಿ ನಡೆಯಲಿರುವ ಸಭೆಯಲ್ಲಿ ಪಾಕಿಸ್ತಾನದ ನಿಯೋಗವನ್ನು ನಿರ್ವಹಿಸಲಿದ್ದಾರೆ ಎಂದು ಪಾಕಿಸ್ತಾನ ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್ ಜಹ್ರಾ ಬಲೋಚ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಸಭೆಯಲ್ಲಿನ ನಮ್ಮ ಭಾಗವಹಿಸುವಿಕೆಯು ಎಸ್ಸಿಓ ಚಾರ್ಟರ್ ಹಾಗೂ ಅದರ ಪ್ರಕ್ರಿಯೆಗಳಿಗೆ ಪಾಕಿಸ್ತಾನದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಪಾಕಿಸ್ತಾನವು ತನ್ನ ವಿದೇಶಾಂಗ ನೀತಿಯ ಆದ್ಯತೆಗಳಲ್ಲಿ ಪ್ರಾದೇಶಿಕವಾಗಿ ನೀಡುವ ಪ್ರಾಮುಖ್ಯತೆಯನ್ನು ಅದು ಎತ್ತಿ ಹಿಡಿಯುತ್ತದೆ ಎಂದು ಅವರು ಹೇಳಿದ್ದಾರೆ.
2014ರಲ್ಲಿ ನವಾಜ್ ಷರೀಫ್ ಭಾರತಕ್ಕೆ ಭೇಟಿ ನೀಡಿದ್ದರು. ಅವರ ನಂತರ ಪಾಕಿಸ್ತಾನದ ಯಾವ ನಾಯಕರೂ ಭೇಟಿ ನೀಡಿರಲಿಲ್ಲ. ಈಗ ಜರ್ದಾರಿ ಅವರು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ.