ನವದೆಹಲಿ: ನಿನ್ನೆ ವಿಧಿವಶರಾದ ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅಂತಿಮ ಯಾತ್ರೆ ವೇಳೆ ಲಕ್ಷಾಂತರ ಮಂದಿ ಸೇರಿದ್ದಾರೆ.
ಬಿಜೆಪಿ ಕಚೇರಿಯಿಂದ ಇದೀಗ ವಾಜಪೇಯಿ ಪಾರ್ಥಿವ ಶರೀರ ಅಂತ್ಯಕ್ರಿಯೆ ನಡೆಯುವ ರಾಷ್ಟ್ರೀಯ ಸ್ಮೃತಿ ಸ್ಥಳಕ್ಕೆ ಕರೆದೊಯ್ಯಲಾಗುತ್ತಿದೆ. ಈ ವೇಳೆ ಪ್ರಧಾನಿ ಮೋದಿ, ಅಮಿತ್ ಶಾ ಮುಂತಾದ ಘಟಾನುಘಟಿ ನಾಯಕರು ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
ಇವರ ಜತೆಗೆ ತಮ್ಮ ಮೆಚ್ಚಿನ ನಾಯಕನನ್ನು ಕೊನೆಯ ಬಾರಿಗೆ ಕಣ್ತುಂಬಿಕೊಳ್ಳಲು ಲಕ್ಷಾಂತರ ಮಂದಿ ರಸ್ತೆಯ ಇಕ್ಕೆಲೆಗಳಲ್ಲಿ ಸೇರಿದ್ದಾರೆ. ಸಂಜೆ ನಾಲ್ಕು ಗಂಟೆಗೆ ಅಂತಿಮ ವಿಧಿ ವಿಧಾನ ನಡೆಯಲಿದ್ದು, ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ಸಕಲ ತಯಾರಿ ನಡೆದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.