ಚೆನ್ನೈ: ಸಾಕು ನಾಯಿಯೊಂದು ಬಾಲಕಿಗೆ ಕಚ್ಚಿ ಗಂಭೀರ ಗಾಯಗೊಳಿಸಿದ ಕಾರಣಕ್ಕೆ ಪೊಲೀಸರು ಮಾಲಕಿಯನ್ನು ಬಂಧಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ.
ಜರ್ಮನ್ ಶೆಫರ್ಡ್ ಜಾತಿಯ ನಾಯಿ ಬಾಲಕಿಯನ್ನು ಅಟ್ಟಾಡಿಸಿಕೊಂಡು ಹೋಗಿ 16 ಬಾರಿ ಕಚ್ಚಿದ್ದರಿಂದ ಆಕೆಗೆ ಗಂಭೀರ ಗಾಯವಾಗಿದೆ. ಈ ಹಿನ್ನಲೆಯಲ್ಲಿ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಯಿ ಕಚ್ಚುತ್ತಿರುವ ದೃಶ್ಯಗಳು ಸ್ಥಳೀಯ ಸಿಸಿಟಿವಿಯಲ್ಲಿ ದಾಖಲಾಗಿತ್ತು.
ಘಟನೆ ಬಗ್ಗೆ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಹೀಗಾಗಿ ಸಿಸಿಟಿವಿ ಆಧರಿಸಿ ಪೊಲೀಸರು ತನಿಖೆ ನಡೆಸಿದ್ದು, ಮಾಲಕಿಯ ವಿರುದ್ಧ ಕ್ರಮ ಕೈಗೊಂಡಿದ್ದಾರೆ.