ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹತ್ಯೆ ಕುರಿತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಅರ್ಜಿಯೊಂದನ್ನು ಸಲ್ಲಿಸಲಾಗಿದೆ.
ದೆಹಲಿ ಮೂಲದ ವಕೀಲರೊಬ್ಬರು ಈ ಅರ್ಜಿ ಸಲ್ಲಿಸಿದ್ದು, “ಹಿಂದೂಗಳು ಮತ್ತು ಸಿಖ್ಖರನ್ನು ಟಾರ್ಗೆಟ್ ಮಾಡಿ ಕೊಲ್ಲಲಾಗುತ್ತಿದ್ದು, ಅಲ್ಲಿರುವ ಅಲ್ಪಸಂಖ್ಯಾತರಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. ಹತ್ಯೆಗೀಡಾದವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಮತ್ತು ಕುಟುಂಬದ ಸದಸ್ಯರಿಗೆ ಸರ್ಕಾರಿ ಕೆಲಸ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
5 ದಿನಗಳಲ್ಲಿ 7 ಮಂದಿ ನಾಗರಿಕರನ್ನು ಕೊಲ್ಲಲಾಗಿದೆ. ಇದು ಅಲ್ಲಿರುವ ಅಲ್ಪಸಂಖ್ಯಾತರಲ್ಲಿ ಅಭದ್ರತೆ ಮತ್ತು ಭಯ ಮೂಡಿಸಿದೆ. ಈಗ ನಡೆಯುತ್ತಿರುವ ಕೃತ್ಯಗಳು 21 ವರ್ಷಗಳ ಹಿಂದೆ ಅನಂತ್ನಾಗ್ನ ಛತ್ತೀಸಿಂಘ್ ಪೋರಾದಲ್ಲಿ ನಡೆದ 36 ಸಿಖ್ಖರ ನರಮೇಧವನ್ನು ನೆನಪಿಸುತ್ತಿದೆ ಎಂದೂ ವಕೀಲ ವಿನೀತ್ ಜಿಂದಾಲ್ ಹೇಳಿದ್ದಾರೆ.