ಕೊಯಮತ್ತೂರು: ತ್ರಿಪುರಾದಲ್ಲಿ ಲೆನಿನ್ ಪ್ರತಿಮೆ ಮತ್ತು ವೆಲ್ಲೂರ್ ನಲ್ಲಿ ಪೆರಿಯಾರ್ ಪ್ರತಿಮೆಯನ್ನು ನೆಲಕ್ಕುರುಳಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಸೇಡು ತೀರಿಸಿಕೊಳ್ಳಲು ಕೊಯಮತ್ತೂರಿನಲ್ಲಿ ಇಂದು ಬಿಜೆಪಿ ಕಚೇರಿ ಮೇಲೆ ಅಪರಿಚಿತ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ.
ಈ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದುಷ್ಕರ್ಮಿಗಳ ಗುಂಪೊಂದು ಬಿಜೆಪಿ ಕಚೇರಿ ಮೇಲೆ ದಾಳಿ ನಡೆಸುತ್ತಿರುವುದು ಸ್ಪಷ್ಟವಾಗಿದೆ. ಆದರೆ ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ