ನವದೆಹಲಿ: ಇನ್ನು ಮುಂದೆ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಒಂದೇ ಆಗಲಿದೆಯಾ? ಈ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಸದ್ಯಕ್ಕೆ ಡೀಸೆಲ್ ದರ ಪೆಟ್ರೋಲ್ ದರಕ್ಕಿಂತ ಸ್ವಲ್ಪ ಕಡಿಮೆಯೇ ಇದೆ. ಆದರೆ ಇನ್ನು ಮುಂದೆ ವಾಹನಗಳ ಮಾಲಿನ್ಯ ತಗ್ಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಎರಡೂ ಇಂಧನಗಳಿಗೆ ಒಂದೇ ದರ ನಿಗದಿಪಡಿಸಲು ಚಿಂತನೆ ನಡೆಸುತ್ತಿದೆ.
ಸರಕು ವಾಹನ ಬಿಟ್ಟು ಉಳಿದೆಲ್ಲಾ ವಾಹನಗಳಿಗೆ ಒಂದೇ ದರ ನಿಗದಿಪಡಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಸುಪ್ರೀಂಕೋರ್ಟ್ ಸಲಹೆ ನೀಡಿದೆ. ಅದರ ಬೆನ್ನಲ್ಲೇ ಕೇಂದ್ರ ಇಂತಹದ್ದೊಂದು ನಿರ್ಧಾರಕ್ಕೆ ಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.