ದೇಶದ ಜನರಿಗೆ ನಾಳೆ ಶುಭಸುದ್ದಿ ಸಿಗುವ ಸಾಧ್ಯತೆ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕುಸಿದಿರುವುದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ. ಸುಮಾರು 2ರಿಂದ 3 ರೂಪಯಿವರೆಗೂ ಇಳಿಕೆ ಸಾಧ್ಯತೆಯನ್ನ ಅಂದಾಜಿಸಲಾಗಿದೆ.
ಈ ಹಿಂದೆ 56 ಡಾಲರ್ ಇದ್ದ ಪ್ರತೀ ಬ್ಯಾರಲ್ ಕಚ್ಚಾತೈಲ ಬೆಲೆ 54 ಡಾಲರ್`ಗೆ ಇಳಿದಿದೆ. ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರಿಂದ ದರ ಪರಿಷ್ಕರಣೆಗೆ ತೈಲ ಕಂಪನಿಗಳು ಮುಂದಾಗಿರಲಿಲ್ಲ. ಹಿನ್ನೆಲೆಯಲ್ಲಿ ಇದೀಗ ದರ ಪರಿಷ್ಕರಣೆಯಾಗುವ ಸಾಧ್ಯತೆ ಹೆಚ್ಚಿದೆ.
ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ ಏರಿಕೆಯಾಗಿರುವುದು ಕಚ್ಚಾ ತೈಲ ಬೆಲೆ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ.