ಬೆಂಗಳೂರು (ಜುಲೈ 07): ಭಾರತದಲ್ಲಿ ಒಂದೆಡೆ ಕೊರೋನಾ ವೈರಸ್ ಅಬ್ಬರವಾದರೆ ಮತ್ತೊಂದೆಡೆ ಬೆಲೆಯೇರಿಕೆಯಿಂದ ಜನರು ತತ್ತರಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ಏರಿಕೆಯಿಂದ ಜನ ತಮ್ಮ ವಾಹನಗಳನ್ನು ರಸ್ತೆಗಿಳಿಸಲು ಯೋಚಿಸುವ ಪರಿಸ್ಥಿತಿ ಬಂದಿದೆ.
ಬುಧವಾರವೂ 50 ಪೈಸೆ ಪೆಟ್ರೋಲ್ ಬೆಲೆ ಏರಿಸಲಾಗಿದೆ. ಪರಿಣಾಮ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಪೆಟ್ರೋಲ್ ಬೆಲೆ 103 ರೂ. ದಾಟಿದೆ. ಕರ್ನಾಟಕ ಮಾತ್ರವಲ್ಲದೆ ರಾಜಸ್ಥಾನ, ಹೈದರಾಬಾದ್ನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 102 ರೂ. ದಾಟಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 106 ರೂ.ಗೆ ಏರಿದ್ದು, ಸಾರ್ವಕಾಲಿಕ ದಾಖಲೆ ಬರೆದಿದೆ. ಜೈಪುರದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ ಈಗಾಗಲೇ 106 ರೂ. ಆಗುವ ಮೂಲಕ ಹೊಸ ದಾಖಲೆ ಬರೆದಿದೆ. ಬೆಂಗಳೂರಿನಲ್ಲೂ 1 ಲೀಟರ್ ಪೆಟ್ರೋಲ್ 103 ರೂ. ಆಗಿದೆ. ಇಂದು ಮತ್ತೆ ಪೆಟ್ರೋಲ್ ಬೆಲೆಯನ್ನು ಏರಿಸಲಾಗಿದೆ. ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಯೆಷ್ಟು? ಇಲ್ಲಿದೆ ಮಾಹಿತಿ...
ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನ, ಒರಿಸ್ಸಾ, ಕೇರಳ, ಆಂಧ್ರಪ್ರದೇಶ, ಲಡಾಖ್, ಬಿಹಾರ, ಜಮ್ಮು ಕಾಶ್ಮೀರದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 103.43 ರೂ. ದಾಟಿದೆ. ಕರ್ನಾಟಕದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ 103 ರೂ. ದಾಟಿದೆ. ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ಗೆ 103 ರೂ. ಆಗಿದೆ. ಇಂದು ಪೆಟ್ರೋಲ್ ಬೆಲೆ ಮತ್ತೆ ಏರಿಕೆಯಾಗಿದ್ದು, ಡೀಸೆಲ್ ಬೆಲೆಯಲ್ಲಿ ಯಾವುದೇ ಏರಿಕೆಯಾಗಿಲ್ಲ.