ಪೆಟ್ರೋಲ್ ಬಂಕ್ ಸಿಬ್ಬಂದಿ ನಾಲ್ವರು ಪತ್ರಕರ್ತರನ್ನು ಸಜೀವವಾಗಿ ದಹಿಸಲು ಯತ್ನಿಸಿದ ಬೆಚ್ಚಿಬೀಳಿಸುವ ಘಟನೆ ಫೈಜಾಬಾದ್‌ನಲ್ಲಿ ನಡೆದಿದೆ. ಸಮಯಕ್ಕೆ ಸರಿಯಾಗಿ ಪೊಲೀಸರು ಸಹಾಯಕ್ಕೆ ಆಗಮಿಸಿದ್ದರಿಂದ ಅವರು ಬಚಾವಾಗಿದ್ದಾರೆ.
ಘಟನೆ ವಿವರ: ಹಿಂದಿ ದಿನಪತ್ರಿಕೆಯೊಂದರಲ್ಲಿ ಪತ್ರಕರ್ತರಾಗಿರುವ ಕೃಷ್ಣಕಾಂತಗುಪ್ತ ಪೆಟ್ರೋಲ್ ಬಂಕ್‌ನಲ್ಲಿ 200 ರೂಪಾಯಿ ಪೆಟ್ರೋಲ್ ಹಾಕಿಸಿಕೊಂಡಿದ್ದರು. ಈ ಸಂದರ್ಭದಲ್ಲಿ 10 ರೂಪಾಯಿ ಮೌಲ್ಯದ 10 ನಾಣ್ಯಗಳನ್ನು ನೀಡಿದ್ದಾರೆ. ಆದರೆ ನಾಣ್ಯಗಳನ್ನು ಸ್ವೀಕರಿಸಲು ನಿರಾಕರಿಸಿದ ಪೆಟ್ರೋಲ್ ಬಂಕ್ ಸಿಬ್ಬಂದಿ ಕೃಷ್ಣಕಾಂತ್ ಮೇಲೆ ಹಲ್ಲೆ ನಡೆಸಿದ್ದಾರೆ.
ಕೃಷ್ಣಕಾಂತ್ ಅವರ ಕಚೇರಿ ಹತ್ತಿರದಲ್ಲೇ ಇದ್ದುದರಿಂದ ಅವರ ಸಹೋದ್ಯೋಗಿಗಳು ಸ್ಥಳಕ್ಕೆ ಓಡಿ ಬಂದಿದ್ದಾರೆ. ಜಗಳ ತಾರಕಕ್ಕೇರುತ್ತಿದ್ದಂತೆ ಬಂಕ್ ಸಿಬ್ಬಂದಿ ಅವರೆಲ್ಲರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾರೆ.
ಇದೆಲ್ಲವನ್ನು ಕಂಡ ಕೆಲವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ನಾಲ್ವರನ್ನು ರಕ್ಷಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ