ಮತದಾರರನ್ನು ದಾರಿ ತಪ್ಪಿಸುವುದು ರಾಜಕೀಯ ಅಪರಾಧವಾಗಿದ್ದು, ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಉಗ್ರರಿದ್ದಂತೆ ಎಂದು ಸಮಾಜವಾದಿ ಪಕ್ಷದ ಮುಖಂಡ ರೇಣುಕಾ ಚೌಧರಿ ಆರೋಪಿಸಿದ್ದಾರೆ.
ಉತ್ತರಪ್ರದೇಶದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನೇ ಪ್ರಧಾನಿ ಮೋದಿ ಈಡೇರಿಸಿಲ್ಲ. ಇದೀಗ ಮತ್ತೆ ಮತ್ತೆ ಹೊಸ ಭರವಸೆಗಳನ್ನು ನೀಡಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉತ್ತರಪ್ರದೇಶದ ಜನತೆಗೆ ರಾಜಕೀಯ ಆಳವಾಗಿ ತಿಳಿದಿರುವುದರಿಂದ ಯಾರು ಮೋಸ ಮಾಡಲು ಸಾಧ್ಯವಿಲ್ಲ. ಮೋದಿ, ಅಮಿತ್ ಶಾ ರಂತಹ ನೂರಾರು ನಾಯಕರನ್ನು ಜನತೆ ನೋಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮುಖ್ಯಮಂತ್ರಿ ಅಖಿಲೇಶ್ ಯಾದವ್ ನೇತೃತ್ವದಲ್ಲಿ ಉತ್ತರ ಪ್ರದೇಶ ರಾಜ್ಯದಲ್ಲಿ ಹಲವಾರು ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳಾಗಿವೆ. ಇದನ್ನು ಸಹಿಸದ ಬಿಜೆಪಿ ಸುಳ್ಳು ಆರೋಪಗಳನ್ನು ಹೊರಿಸುತ್ತಾ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಸಂಚು ರೂಪಿಸಿದೆ ಎಂದು ಸಮಾಜವಾದಿ ಪಕ್ಷದ ಮುಖಂಡ ರೇಣುಕಾ ಚೌಧರಿ ಕಿಡಿಕಾರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.