Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಉತ್ತರ ಪ್ರದೇಶ ಬಸ್ ದುರಂತ: ಮೃತರ ಕುಟುಂಬಕ್ಕೆ ಪ್ರಧಾನಿ ಪರಿಹಾರ

ಉತ್ತರ ಪ್ರದೇಶ ಬಸ್ ದುರಂತ: ಮೃತರ ಕುಟುಂಬಕ್ಕೆ ಪ್ರಧಾನಿ ಪರಿಹಾರ
ನವದೆಹಲಿ , ಸೋಮವಾರ, 5 ಜೂನ್ 2017 (15:58 IST)
ನವದೆಹಲಿ: ಉತ್ತರ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾವನಪ್ಪಿದ 22 ದುರಂತಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
 
ಘಟನೆ ಸಂಬಂಧ ತೀವ್ರ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ 15 ಮಂದಿ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ. ಪ್ರಧಾನಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಈ ಪರಿಹಾರವನ್ನು ಪ್ರಕಟಿಸಿರುವ ಮೋದಿ ಅವರು, "ಆಗಿರುವ ಜೀವ ಹಾನಿಗೆ ಸಂತಾಪವಿದೆ; ಗಾಯಾಳುಗಳು ಬೇಗನೆ ಗುಣಮುಖವಾಗಲೆಂದು ಪ್ರಾರ್ಥಿಸುತ್ತೇನೆ' ಎಂದು  ತಿಳಿಸಿದ್ದಾರೆ.
 
ಉತ್ತರ ಪ್ರದೇಶದ ಬರೇಲಿ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 24 ರ ಬಳಿ ಇಂದು ಮುಂಜಾನೆ ಸಂಭವಿಸಿದ ಬಸ್-ಟ್ರಕ್ ಮುಖಾ ಮುಖಿ ಡಿಕ್ಕಿಯಲ್ಲಿ ಬಸ್ ಗೇ ಬೆಂಕಿ ಹೊತ್ತ್ಕೊಂಡ ಪರಿಣಾಮ 22 ಜನರು ಸಜೀವ ದಹನಗೊಂಡಿದ್ದರು.


ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

Share this Story:

Follow Webdunia kannada

ಮುಂದಿನ ಸುದ್ದಿ

ಶೌಚಾಲಯಕ್ಕೆ ಹೋಗುವ ಮಹಿಳೆಯರೇ ಟಾರ್ಗೆಟ್: ವಿಡಿಯೋ ಮಾಡುತ್ತಿದ್ದ ಕಾಮುಕ ಅರೆಸ್ಟ್