ಸೀಮಿತ ದಾಳಿಯ ನಂತರ ಉಭಯ ದೇಶಗಳ ಗಡಿಭಾಗಗಳಲ್ಲಿ ಉದ್ಭವವಾಗಿರುವ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಭಾರತೀಯ ಸೇನಾ ಪಡೆ ಉನ್ನತ ಅಧಿಕಾರಿಗಳು ಗಡಿರೇಖೆಯಲ್ಲಿರುವ ಪರಿಸ್ಥಿತಿಯ ಬಗ್ಗೆ ಪ್ರಧಾನಿಗೆ ಮಾಹಿತಿ ನೀಡಿದ್ದು, ಮುಂದೆ ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಂತಾರಾಷ್ಟ್ರೀಯ ಗಡಿಯಲ್ಲಿರುವ ಪರಿಸ್ಥಿತಿಯ ಬಗ್ಗೆಯೂ ಮಾಹಿತಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ಸೆಪ್ಟೆಂಬರ್ 29 ರಂದು ಭಾರತೀಯ ಸೇನಾಪಡೆಗಳು ಪಾಕ್ ಆಕ್ರಮಿತ ಕಾಶ್ಮಿರದೊಳಗೆ ನುಗ್ಗಿ ಸೀಮಿತ ದಾಳಿ ನಡೆಸಿ ಉಗ್ರರನ್ನು ಹತ್ಯೆಗೈದ ನಂತರ ಉಭಯ ದೇಶಗಳ ಗಡಿಯಲ್ಲಿ ಉದ್ರಿಕ್ತ ವಾತಾವರಣ ಉಂಟಾಗಿದೆ.
ಸೀಮಿತ ದಾಳಿಯ ಸೇಡು ತೀರಿಸಿಕೊಳ್ಳಲು ಪಾಕಿಸ್ತಾನ ಸೇನೆ ಗಡಿ ಭಾಗಗಳಲ್ಲಿ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ