ಭಾರತ ಮತ್ತು ಪಾಕಿಸ್ತಾನ ದೇಶಗಳ ಉದ್ರಿಕ್ತ ಸ್ಥಿತಿಯ ಮಧ್ಯೆಯೂ ಪ್ರಧಾನಮಂತ್ರಿ ನರೇಂದ್ರ ಮೋದಿ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ಗೆ ಹುಟ್ಟು ಹಬ್ಬದ ಶುಭಾಷಯಗಳನ್ನು ಕೋರಿದ್ದಾರೆ.
67ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಆರೋಗ್ಯವಂತರಾಗಿ ದೀರ್ಘಕಾಲದವರೆಗೆ ಬಾಳಲಿ ಎಂದು ಪ್ರಧಾನಿ ಮೋದಿ ಹಾರೈಸಿದ್ದಾರೆ.
ಉಗ್ರರ ದಾಳಿಗಳಿಂದಾಗಿ ಉಭಯ ದೇಶಗಳ ಮಧ್ಯೆ ತೀವ್ರ ತೆರನಾದ ಉದ್ರಿಕ್ತ ಸ್ಥಿತಿಯಿದ್ದು ಪಾಕಿಸ್ತಾನ ಗಡಿಭಾಗದಲ್ಲಿ ಪ್ರತಿನಿತ್ಯ ಕದನ ವಿರಾಮ ಉಲ್ಲಂಘಿಸುತ್ತಿದೆ.
ಕಳೆದ ವರ್ಷ ಪ್ರಧಾನಿ ಮೋದಿ ಯಾವುದೇ ಮಾಹಿತಿ ನೀಡದೆ ಪಾಕಿಸ್ತಾನದ ಲಾಹೋರ್ಗೆ ತೆರಳಿ ನವಾಜ್ ಷರೀಫ್ಗೆ ಹುಟ್ಟು ಹಬ್ಬದ ಶುಭಾಷಯಗಳನ್ನು ಕೋರಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.