ಡೋಕ್ಲಾಮ್ ವಿವಾದ ಅಂತ್ಯಗೊಂಡ ಮಾರನೇ ದಿನವೇ ಪ್ರಧಾನಮಂತ್ರಿ ನರೇಂದ್ರ ಮೋದಿ ಬ್ರಿಕ್ಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಚೀನಾಗೆ ತೆರಳಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಚೀನಾದಲ್ಲಿ ಬ್ರಿಕ್ಸ್ ಸಮಾವೇಶ ಸೆಪ್ಟೆಂಬರ್ 3 ರಿಂದ 5 ರವರೆಗೆ ನಡೆಯಲಿದ್ದು, ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬ್ರಿಕ್ಸ್ ಶೃಂಗಸಭೆಯನ್ನು ಚೀನಾದ ಫುಜಿಯಾನ್ ಪ್ರಾಂತ್ಯದ ಕ್ಸಿಯಾಮೆನ್ ನಗರದಲ್ಲಿ ಆಯೋಜಿಸಲಾಗುತ್ತಿದೆ.
ಮ್ಯಾನ್ಮಾರ್ ಅಧ್ಯಕ್ಷ ಯು.ಹಿನ್ ಕ್ವಾವ್ ಅವರ ಆಮಂತ್ರಣದ ಮೇರೆಗೆ ಸೆಪ್ಟೆಂಬರ್ 5 ರಿಂದ 7 ರವರೆಗೆ ಪ್ರಧಾನಿ ಮೋದಿ ಮ್ಯಾನ್ಮಾರ್‌ಗೆ ಭೇಟಿ ನೀಡಲಿದ್ದಾರೆ ಎಂದು ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರು ಪರಸ್ಪರ ಹಿತಾಸಕ್ತಿಯ ವಿಷಯಗಳ ಬಗ್ಗೆ ರಾಜ್ಯ ಕೌನ್ಸಿಲರ್ ಆಂಗ್ ಸಾನ್ ಸುಕಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.