ಜಿಲ್ಲೆಯ ಕೆವಡಿಯಾ ಬಳಿ ನಿರ್ಮಿಸಲಾದ ವಿಶ್ವದ ಎರಡನೇ ಅತಿ ದೊಡ್ಡ ಸರ್ದಾರ್ ಸರೋವರ್ ಡ್ಯಾಂ ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದ್ದಾರೆ.
ನರ್ಮದಾ ನದಿಗೆ ಅಡ್ಡಲಾಗಿ ಕಟ್ಟಿರುವ ಸರ್ದಾರ್ ಸರೋವರ್ ಆಣೆಕಟ್ಟಿನಿಂದ ಸುಮಾರು 10 ಲಕ್ಷಕ್ಕೂ ಹೆಚ್ಚು ರೈತರಿಗೆ ಅನುಕೂಲವಾಗಲಿದೆ. 65 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದೆ. 4 ಕೋಟಿ ಜನರಿಗೆ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದ್ದಾರೆ.
ಆಣೆಕಟ್ಟು ನಿರ್ಮಾಣದಿಂದ ಕೃಷಿಗೆ ಹೆಚ್ಚಿನ ಆದ್ಯತೆ ದೊರೆತಂತಾಗಿದ್ದು, ರೈತರಿಗೆ ಹೆಚ್ಚಿನ ಲಾಭವಾಗಲಿದೆ. ನೀರಾವರಿ ಕೃಷಿ ಅವಲಂಬಿಸಿರುವ ರೈತರು ಇನ್ಮುಂದೆ ಆತಂಕಪಡುವ ಅಗತ್ಯವಿಲ್ಲ ಎಂದರು.
ಕೇಂದ್ರ ಸರಕಾರ ರೈತರಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿದೆ. ಮುಂಬರುವ ದಿನಗಳಲ್ಲಿ ರೈತರಿಗೆ ಸರಕಾರದಿಂದ ಮತ್ತಷ್ಟು ಸೌಲಭ್ಯಗಳು ದೊರೆಯಲಿವೆ. ರೈತರು ಸರಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
1961 ಏಪ್ರಿಲ್ 5 ರಂದು ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಶಿಲಾನ್ಯಾಸ ನೆರವೇರಿಸಿದ್ದರು. ಶಂಕುಸ್ಥಾಪನೆ ನೆರವೇರಿಸಿ 56 ವರ್ಷಗಳ ನಂತರ ಆಣೆಕಟ್ಟು ಉದ್ಘಾಟನೆಯಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.