Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನವದೆಹಲಿ: ಪ್ರಧಾನಿ ಮೋದಿ ತಮ್ಮ ಸಂಪುಟದಲ್ಲಿ ಭಾರೀ ಬದಲಾವಣೆ ಮಾಡಲು ಸಿದ್ಧತೆ ನಡೆಸಿದ್ದಾರೆ ಎಂದು ಆಂಗ್ಲ ವಾಹಿನಿಯೊಂದು ವರದಿ ಮಾಡಿದೆ.
ವರದಿಯ ಪ್ರಕಾರ, ಇಂದಿನಿಂದ ಪ್ರಧಾನಿ ಮೋದಿ ಪ್ರತೀ ಸಚಿವರೊಂದಿಗೆ ಪ್ರತ್ಯೇಕ ಮಾತುಕತೆ ನಡೆಸಲಿದ್ದು, ಅವರ ಕಾರ್ಯನಿರ್ವಹಣೆಗೂ ಶ್ರೇಯಾಂಕ ನೀಡಲಿದ್ದಾರೆ. ಇದಾದ ಬಳಿಕ ಸಂಪುಟ ಪುನರಚನೆ ಮಾಡಲಿದ್ದಾರೆ ಎನ್ನಲಾಗಿದೆ.
ವಿವಿಧ ಖಾತೆಗಳನ್ನು ನಿಭಾಯಿಸುತ್ತಿರುವ ಸಚಿವರ ಒತ್ತಡ ಕಡಿಮೆ ಮಾಡಲು ಅವರ ಜವಾಬ್ಧಾರಿಗಳನ್ನು ಕಡಿತಗೊಳಿಸಲಿದ್ದಾರೆ ಎನ್ನಲಾಗಿದೆ. ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿದ್ದು, ದೇಶ ಮತ್ತೆ ಸಹಜ ಸ್ಥಿತಿಗೆ ಬರುತ್ತಿರುವ ಬೆನ್ನಲ್ಲೇ ಮೋದಿ ತಮ್ಮ ಸಂಪುಟಕ್ಕೆ ಸರ್ಜರಿ ಮಾಡಲು ಮುಂದಾಗಿದ್ದಾರೆ.