ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಇಂದು ಪ್ರಧಾನಿ ಮೋದಿ ವ್ಯಾಕ್ಸಿನ್ ತಯಾರಕರೊಂದಿಗೆ ಸಭೆ ನಡೆಸಲಿದ್ದಾರೆ.
ಸದ್ಯಕ್ಕೆ ದೇಶದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಆದರೆ ಯುವಜನಾಂಗದಲ್ಲೇ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ವಯೋಮಿತಿ ಇಳಿಕೆ ಮಾಡಿ ಎಂಬ ಬೇಡಿಕೆ ಬರುತ್ತಿದೆ.
ಹೀಗಾಗಿ ಈ ಬಗ್ಗೆ ಪ್ರಧಾನಿ ಸಭೆಯಲ್ಲಿ ಚರ್ಚೆ ನಡೆಸಬಹುದು. ಮುಂದಿನ ತಿಂಗಳಿನಿಂದ 18 ವರ್ಷ ಮೇಲ್ಪಟ್ಟವರಿಗೂ ಲಸಿಕೆ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳುವ ನಿರೀಕ್ಷೆಯಿದೆ. ಜೊತೆಗೆ ವಿವಿಧ ರಾಜ್ಯಗಳಿಂದ ಲಸಿಕೆಗಾಗಿ ಬೇಡಿಕೆ ಬಂದಿದ್ದು, ಇದನ್ನು ಪೂರೈಸುವ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚೆ ನಡೆಯಬಹುದಾಗಿದೆ.