ಅರಬ್ಬಿ ಸಮುದ್ರದ ಮಧ್ಯಭಾಗದಲ್ಲಿ ಮರಾಠಾ ದೊರೆ ಛತ್ರಪತಿ ಶಿವಾಜಿ ಪ್ರತಿಮೆ ನಿರ್ಮಿಸಲಾಗುತ್ತಿದ್ದು, ಪ್ರತಿಮೆ ನಿರ್ಮಾಣಕ್ಕೆ ಪ್ರಧಾನಿ ಮೋದಿ ಇಂದು ಶಂಕು ಸ್ಥಾಪನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಪ್ರಧಾನಿಗೆ ಸಾಥ್ ನೀಡಿದ್ದಾರೆ.
ಮುಂಬೈನ್ ಗಿರ್‌ಗಾಮ್ ಚೌಪಾಯಿಲ್ಲಿ 36,00 ಕೋಟಿ ರೂಪಾಯಿ ವೆಚ್ಚದಲ್ಲಿ 192 ಮೀಟರ್ ಎತ್ತರದ ಪ್ರತಿಮೆ ನಿರ್ಮಾಣವಾಗಲಿದೆ.
ಶಿವಾಜಿ ಪ್ರತಿಮೆ ನಿರ್ಮಾಣವಾಗಬೇಕೆಂಬುದು ಮರಾಠಿಗರ ಮತ್ತು ಹಲವರ ಬಹುದಿನದ ಬೇಡಿಕೆಯಾಗಿತ್ತು. ಆದರೆ ಮೀನುಗಾರಿಕೆಗೆ ತೊಂದರೆಯಾಗುತ್ತದೆ ಎಂಬ ಕಾರಣ ಮುಂದಿಟ್ಟುಕೊಂಡು ಮೀನುಗಾರರು ಈ ಬೃಹತ್ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದು ಸಮುದ್ರ ತೀರದಲ್ಲಿ ಪ್ರತಿಭಟನೆ ಕೈಗೊಂಡಿದ್ದಾರೆ.
ಇತಿಹಾಸದ ಪುಟಗಳಲ್ಲಿ ಅಚ್ಚಳಿಯದಂತೆ ಉಳಿದ ಸ್ವಾಭಿಮಾನಿ, ದೇಶಭಕ್ತ ಶಿವಾಜಿ ಮಹಾರಾಜ್, ಬ್ರಿಟಿಷರ ಗುಂಡಿಗೆ ನಡುಗಿಸಿದ ಸಾಮ್ರಾಟ.ಮರಾಠಾ ದೊರೆಯನ್ನು ವಿಶ್ವವಿಖ್ಯಾತನಾಗಿಸುವ ಉದ್ದೇಶದಿಂದ ಈ ಪ್ರತಿಮೆಯನ್ನು ನಿರ್ಮಾಣ ಮಾಡಲಾಗುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.