Webdunia - Bharat's app for daily news and videos

Install App

ಮಂಡ್ಯದ ಸಾಮಾನ್ಯ ರೈತನಿಗೆ ಮನ್ ಕೀ ಬಾತ್ ನಲ್ಲಿ ಅಭಿನಂದಿಸಿದ ಪ್ರಧಾನಿ ಮೋದಿ

Webdunia
ಸೋಮವಾರ, 29 ಜೂನ್ 2020 (09:49 IST)
ಮಂಡ್ಯ: ಕೆಲವು ದಿನಗಳ ಹಿಂದೆ ಮಂಡ್ಯದ ಮಳವಳ್ಳಿಯ ರೈತ ಕಾಮೇಗೌಡ ಎಂಬವರ ಸಾಮಾಜಿಕ ಕಳಕಳಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು.  ಇದೀಗ ಆ ರೈತನಿಗೆ ಪ್ರಧಾನಿ ಮೋದಿ ತಮ್ಮ ಮನ್ ಕೀ ಬಾತ್ ನಲ್ಲಿ ಅಭಿನಂದಿಸಿದ್ದಾರೆ.


ಜಲಸಂರಕ್ಷಣೆ ಕಾಯಕದಲ್ಲಿ ತೊಡಗಿರುವ ಕಾಮೇಗೌಡ ಯಾವ ಪ್ರತಿಫಲಾಪೇಕ್ಷೆಯೂ ಇಲ್ಲದೇ ಇದುವರೆಗೆ 16 ಕೊಳಗಳನ್ನು ನಿರ್ಮಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇವರ ನಿಸ್ವಾರ್ಥ ಸೇವೆಯನ್ನು ಇದೀಗ ಪ್ರಧಾನಿ ಮೋದಿ ಕೊಂಡಾಡಿದ್ದಾರೆ.

ಕಾಮೇಗೌಡರ ಸಾಧನೆ ಬಗ್ಗೆ ಉಲ್ಲೇಖಿಸಿರುವ ಪ್ರಧಾನಿ ಮೋದಿ ಅವರ ಪ್ರಯತ್ನ ತುಂಬಾ ದೊಡ್ಡದು.ಅವರು ನಿರ್ಮಿಸಿದ್ದು ಸಣ್ಣ ಕೊಳಗಳೇ ಆಗಿರಬಹುದು. ಆದರೆ ಅವರು ಪರಿಶ್ರಮದಿಂದ ನಿರ್ಮಿಸಿರುವ ಕೊಳಗಳಿಂದ ಇಂದು ಅವರ ಊರಿನವರಿಗೆ ಹೊಸ ಜೀವನ ಸಿಕ್ಕಂತಾಗಿದೆ ಎಂದು ಕಾಮೇಗೌಡರ ಬಗ್ಗೆ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments