ನವದೆಹಲಿ: ಕಾಶ್ಮೀರಕ್ಕೆ ಸ್ವಾಯತ್ತತೆ ಬೇಕು ಎಂದು ವಿವಾದಿತ ಹೇಳಿಕೆ ನೀಡಿದ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ವಿರುದ್ಧ ಪ್ರಧಾನಿ ಮೋದಿ ಕೆಂಡ ಕಾರಿದ್ದಾರೆ.
ಕಾಂಗ್ರೆಸ್ ನಾಯಕರ ಈ ಹೇಳಿಕೆ, ಕಾಶ್ಮೀರ ಪ್ರತ್ಯೇಕತಾವಾದಿಗಳ ಹೇಳಿಕೆಗೂ ಯಾವುದೇ ವ್ಯತ್ಯಾಸವಿಲ್ಲ. ಈ ರೀತಿ ಯಾವುದೇ ನಾಚಿಕೆಯಿಲ್ಲದೇ ಕಾಂಗ್ರೆಸ್ ನಾಯಕರು ಮಾತನಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಕಿಡಿ ಕಾರಿದ್ದಾರೆ.
ಅಷ್ಟೇ ಅಲ್ಲದೆ, ಈ ಹೇಳಿಕೆ ನೀಡುವ ಮೂಲಕ ನಮ್ಮ ಹೆಮ್ಮೆಯ ಸೈನಿಕರಿಗೆ ಅಪಮಾನವೆಸಗಿದ್ದಾರೆ ಎಂದು ಅವರು ಟೀಕಿಸಿದ್ದಾರೆ. ಸಾರ್ವಜನಿಕವಾಗಿ ಹೀಗೆ ನಾಚಿಕೆಯಿಲ್ಲದೇ ಕಾಶ್ಮೀರದ ಸ್ವಾತಂತ್ರ್ಯಕ್ಕಾಗಿ ಮಾತನಾಡುವ ಕಾಂಗ್ರೆಸ್ ನಾಯಕರು ಯಾಕೆ ಸರ್ಜಿಕಲ್ ದಾಳಿಯನ್ನು ವಿರೋಧಿಸಿದರು ಎಂದು ನನಗೀಗ ಅರ್ಥವಾಗುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ಈ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಮೌನವಾಗಿರಲು ತೀರ್ಮಾನಿಸಿದೆ. ಇದು ಚಿದಂಬರಂ ವೈಯಕ್ತಿಕ ಹೇಳಿಕೆ ಇದು ಕೈ ತೊಳೆದುಕೊಂಡಿದೆ. ಪ್ರಧಾನಿ ಮೋದಿ ಟೀಕೆಗೆ ತಿರುಗೇಟು ನೀಡಿರುವ ಚಿದಂಬರಂ ನನ್ನ ಹೇಳಿಕೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದ ಪ್ರಧಾನಿ ಮೋದಿ ಪಿಶಾಚಿಯೊಂದನ್ನು ಕಲ್ಪಿಸಿಕೊಂಡು ಅದರ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ