Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನವದೆಹಲಿ: ಪ್ರಧಾನಿ ಮೋದಿ ಪ್ರವಾಹ ಪೀಡಿತ ಸ್ಥಳಕ್ಕೆ ಭೇಟಿ ನೀಡಿಲ್ಲವೆಂದು ನಟಿ, ಮಾಜಿ ಸಂಸದೆ ರಮ್ಯಾ ಟೀಕೆ ಮಾಡಿದ್ದರು. ಆದರೆ ಇದೀಗ ಟೀಕಾಕಾರರ ಬಾಯಿಗೆ ಬೀಗ ಬೀಳಲಿದೆ.
ಪ್ರಧಾನಿ ಮೋದಿ ಇಂದು ಬಿಹಾರದ ಪ್ರವಾಹ ಪೀಡಿತ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ನಿತೀಶ್ ಕುಮಾರ್ ಕೂಡಾ ಸಾಥ್ ನೀಡುವ ಸಾಧ್ಯತೆಯಿದೆ.
ರಾಷ್ಟ್ರೀಯ ವಿಪತ್ತು ದಳದ ಅಂದಾಜಿನ ಪ್ರಕಾರ ಬಿಹಾರದಲ್ಲಿ ಪ್ರವಾಹದಿಂದಾಗಿ 158 ಲಕ್ಷಕ್ಕೂ ಅಧಿಕ ಮಂದಿ ಪ್ರವಾಹದಿಂದಾಗಿ ಸಂಕಷ್ಟಕ್ಕೀಡಾಗಿದ್ದಾರೆ. ಇತ್ತೀಚೆಗಷ್ಟೇ ನಟಿ ರಮ್ಯಾ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರವಾಹ ಪೀಡಿತರೊಂದಿಗೆ ಪ್ರಧಾನಿ ಮೋದಿ ಇರುವ ಫೋಟೋ ತೋರಿಸಿದರೆ 25 ಸಾವಿರ ರೂ. ಬಹುಮಾನ ನೀಡುವುದಾಗಿ ಹೇಳಿದ್ದರು. ಇದು ವ್ಯಾಪಕ ಟೀಕೆಗೆ ಗುರಿಯಾಗಿತ್ತು.