Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇಂದು ಉತ್ತರಾಖಂಡ್ಗೆ ಪ್ರಧಾನಿ ಮೋದಿ ಭೇಟಿ

ಇಂದು ಉತ್ತರಾಖಂಡ್ಗೆ ಪ್ರಧಾನಿ ಮೋದಿ ಭೇಟಿ
ನವದೆಹಲಿ , ಗುರುವಾರ, 7 ಅಕ್ಟೋಬರ್ 2021 (13:41 IST)
ಪ್ರಧಾನಿ ನರೇಂದ್ರ ಮೋದಿಯವರು ಇಂದು ಉತ್ತರಾಖಂಡ್ಗೆ ಭೇಟಿ ನೀಡಲಿದ್ದು, ಪಿಎಂ ಕೇರ್ಸ್ ನಿಧಿಯಿಂದ ನಿರ್ಮಾಣ ಮಾಡಲಾಗಿರುವ 35 ಪ್ರೆಶರ್ ಸ್ವಿಂಗ್ ಹೀರಿಕೊಳ್ಳುವಿಕೆಯ ಆಮ್ಲಜನಕ ಸ್ಥಾವರಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಈ ಕಾರ್ಯಕ್ರಮ ರಿಶಿಕೇಶದಲ್ಲಿರುವ ಏಮ್ಸ್ನಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಪ್ರಧಾನಮಂತ್ರಿ ಕಚೇರಿ ಮಾಹಿತಿ ನೀಡಿದೆ. 
ಈ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡ ನಿನ್ನೆ ಟ್ವೀಟ್ ಮಾಡಿದ್ದರು. ನಾನು ನಾಳೆ (ಅಕ್ಟೋಬರ್ 7) ದೇವಭೂಮಿ ಉತ್ತರಾಖಂಡ್ಗೆ ತೆರಳುತ್ತಿದ್ದೇನೆ. ಅಲ್ಲಿ ನಡೆಯಲಿರುವ ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ 35 ಪಿಎಸ್ಎ ಆಕ್ಸಿಜನ್ ಸ್ಥಾವರಗಳನ್ನು ಲೋಕಾರ್ಪಣೆ ಮಾಡಲಾಗುವುದು. ಇದೊಂದು ಪ್ರಮುಖ ಆರೋಗ್ಯ ಸೌಕರ್ಯವಾಗಿದ್ದು, ಹೆಚ್ಚಿನ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದಿದ್ದರು.
2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್ಗೆ ಭೇಟಿ ನೀಡಿದ ಮೇಲೆ ಮತ್ತೆ ಆಗಮಿಸಿರಲಿಲ್ಲ. ಮುಂದಿನ ವರ್ಷ ಇಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಆ ದೃಷ್ಟಿಯಿಂದ ಪ್ರಧಾನಿ ಭೇಟಿ ಮಹತ್ವ ಪಡೆದುಕೊಂಡಿದೆ. ಅಂದಹಾಗೆ ಇಂದಿನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರ ಜತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಉತ್ತರಾಖಂಡ ರಾಜ್ಯಪಾಲ ಗುರ್ಮಿತ್ ಸಿಂಗ್, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಮಿ ಕೂಡ ಭಾಗವಹಿಸಲಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಬಿಜೆಪಿಯಿಂದ ರಾಷ್ಟ್ರಾದ್ಯಂತ ಸೇವಾ ಕಾರ್ಯ