Publish Date: Wed, 02 Oct 2019 (07:54 IST)
Updated Date: Wed, 02 Oct 2019 (07:56 IST)
ನವದೆಹಲಿ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ 150 ನೇ ಜನ್ಮ ಜಯಂತಿ ಪ್ರಯುಕ್ತ ಪ್ರಧಾನಿ ಮೋದಿ ರಾಜಘಾಟ್ ಗೆ ತೆರಳಿ ನಮನ ಸಲ್ಲಿಸಿದ್ದಾರೆ.
ಪ್ರಧಾನಿ ಮೋದಿ ರಾಜ್ ಘಾಟ್ ನ ಗಾಂಧೀಜಿ ಸಮಾಧಿಗೆ ಬೆಳ್ಳಂ ಬೆಳಿಗ್ಗೆಯೇ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ. ಗಾಂಧೀಜಿ ಜನ್ಮ ಜಯಂತಿ ಹಿನ್ನಲೆಯಲ್ಲಿ ಇಂದು ಬಿಜೆಪಿ ವತಿಯಿಂದ ಪಕ್ಷದ ರಾಷ್ಟ್ರಾಧ‍್ಯಕ್ಷ ಅಮಿತ್ ಶಾ ಗಾಂಧಿ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲಿದ್ದಾರೆ.
ಇನ್ನು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಪುತ್ರ ರಾಹುಲ್ ಗಾಂಧಿ ಮತ್ತಿತರ ವಿಪಕ್ಷ ನಾಯಕರೂ ಗಾಂಧೀಜಿ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ.