ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತಂತೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕೆ ಹೊರತು ಕೇಂದ್ರ ಸಚಿವ ಉಮಾಭಾರತಿಯಲ್ಲ ಎಂದು ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಹೇಳಿದ್ದಾರೆ.
ಕೇಂದ್ರ ಸಚಿವೆ ಉಮಾಭಾರತಿ ಕರ್ನಾಟಕದ ಪರವಾಗಿರುವುದರಿಂದ ಅವರು ಉಭಯ ರಾಜ್ಯಗಳ ಸಚಿವರ ಸಭೆಯ ನೇತೃತ್ವವಹಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸುಪ್ರೀಂಕೋರ್ಟ್ ಸಲಹೆಯಂತೆ ಕೇಂದ್ರ ಸರಕಾರ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯ ನೇತೃತ್ವವನ್ನು ಕೇಂದ್ರ ಸಚಿವೆ ಉಮಾಭಾರತಿ ವಹಿಸಿಕೊಳ್ಳುವುದರಿಂದ ಪಕ್ಷಪಾತ ಧೋರಣೆ ಅನುಸರಿಸಿದಂತಾಗುತ್ತದೆ ಎಂದು ತಿಳಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಸಚಿವೆ ಉಮಾ ಭಾರತಿ ತಮಿಳುನಾಡಿಗೆ ನೀರು ಬಿಡದಿರುವ ಕರ್ನಾಟಕ ನಿರ್ಧಾರಕ್ಕೆ ಬೆಂಬಲ ಸೂಚಿಸಿದ್ದಾರೆ ಎನ್ನುವ ವರದಿಗಳು ಹರಡಿರುವುದರಿಂದ, ಸಭೆಯ ಫಲಿತಾಂಶ ತಮಿಳುನಾಡು ಪರವಾಗಿ ಬರಲಿದೆ ಎನ್ನುವ ಅನುಮಾನ ಎದುರಾಗಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸಚಿವೆ ಉಮಾಭಾರತಿ ಮಧ್ಯಸ್ಥಿಕೆ ವಹಿಸುವ ಬದಲು ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಿದಲ್ಲಿ ಒಂದು ಒಳ್ಳೆಯ ಫಲಿತಾಂಶ ಹೊರಬರುತ್ತಿತ್ತು ಎಂದು ಹೇಳಿದ್ದಾರೆ.
ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಮೂರು ದಿನಗಳ ಕಾಲ ಒಟ್ಟು 18 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ ಸರಕಾರಕ್ಕೆ ಆದೇಶ ನೀಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ