ವಿಡಿಯೋ ಸಾರ್ವಜನಿಕವಾಗಿ ಬಿಡುಗಡೆಗೊಳಿಸಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಕೇಂದ್ರ ಸಚಿವ ಹಂಸರಾಜ್ ಹೇಳಿಕೆ ನೀಡಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮಿರದ ಮೇಲೆ ಭಾರತೀಯ ಸೇನೆ ನಡೆಸಿರುವ ಸೀಮಿತ ದಾಳಿಯ ವಿಡಿಯೋ ಬಹಿರಂಗಪಡಿಸುವ ಚರ್ಚೆ ಆರಂಭವಾಗುತ್ತಿದ್ದಂತೆ, ಭಾರತೀಯ ಸೇನೆ ಸೀಮಿತ ದಾಳಿಯ ವಿಡಿಯೋವನ್ನು ಕೇಂದ್ರ ಸರಕಾರಕ್ಕೆ ಒಪ್ಪಿಸಿದೆ.
ಸೇನಾಪಡೆ ಒಪ್ಪಿಸಿದ ವಿಡಿಯೋ ಬಿಡುಗಡೆ ಮಾಡುವುದು ಕೇಂದ್ರ ಸರಕಾರಕ್ಕೆ ಬಿಟ್ಟ ವಿಷಯ ಎಂದು ಭಾರತೀಯ ಸೇನೆ ಹೇಳಿಕೆ ನೀಡಿದೆ. ಸೀಮಿತ ದಾಳಿಯನ್ನು ರಾಜಕೀಯಗೊಳಿಸುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನ ವಶಕ್ಕೆ ತೆಗೆದುಕೊಂಡ 37ನೇ ರಾಷ್ಟ್ರೀಯ ರೈಫಲ್ಸ್ ಪಡೆಯ ಸೈನಿಕರಾದ ಚಂದು ಬಾಬುಲಾಲ್ ಚವ್ಹಾಣ್ ಅವರ ಬಿಡುಗಡೆ ಕುರಿತಂತೆ ಕೇಂದ್ರ ಸರಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ತಿಳಿಸಿದ್ದಾರೆ.
ಸೀಮಿತ ದಾಳಿ ನಕಲಿ ಎನ್ನುವ ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವ ಆಹಿರ್, ಸಂಜಯ್ ನಿರುಪಮ್ ಶಿವಸೇನೆ ಸಂಸ್ಥಾಪಕ ಬಾಳಾ ಠಾಕ್ರೆಯವರಿಗೆ ನಿಷ್ಠರಾಗಿರಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಹೇಗೆ ನಿಷ್ಠರಾಗುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ