Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಲಕ್ನೋ: ಹೆದ್ದಾರಿಗಳಲ್ಲಿ ಓಡಾಡುವ ವಾಹನಗಳನ್ನು ತಡೆದು ದರೋಡೆ ಮಾಡುತ್ತಿದ್ದ ಗ್ಯಾಂಗ್ ನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ ಎರಡು ಮೋಟಾರ್ ಬೈಕ್ ಮತ್ತು ಪರವಾನಗಿ ರಹಿತ ಗನ್ ವಶಪಡಿಸಿಕೊಳ್ಳಲಾಗಿದೆ. ಒಟ್ಟು ನಾಲ್ಕು ಮಂದಿ ಆಪಾದಿತರ ಪೈಕಿ ಮೂವರು ಸೆರೆ ಸಿಕ್ಕಿದ್ದು, ಪೊಲೀಸರ ರೈಡ್ ವೇಳೆ ತಪ್ಪಿಸಿಕೊಂಡಿದ್ದಾನೆ.
ಹಲವು ಬಾರಿ ಈ ಗ್ಯಾಂಗ್ ನ ದರೋಡೆ ಬಗ್ಗೆ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರುಗಳು ಕೇಳಿಬರುತ್ತಿದ್ದವು. ಹೀಗಾಗಿ ಪೊಲೀಸರು ಕಾರ್ಯಪ್ರವೃತ್ತರಾಗಿದ್ದರು.