ನವದೆಹಲಿ : ಪೊಲೀಸರು ಮೇಲೆ ವಕೀಲರ ನಡೆಸಿದ ಹಲ್ಲೆಯನ್ನು ಖಂಡಿಸಿ ನೂರಾರು ಪೊಲೀಸರು, ಪೊಲೀಸ್ ಪ್ರಧಾನ ಕಚೇರಿಯ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಶನಿವಾರ ಸಾಕೆತ್ ನ್ಯಾಯಾಲಯದ ಆವರಣದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರತಿಭಟನಾ ನಿರತ ಪೊಲೀಸರು ಆಗ್ರಹಿಸಿದ್ದಾರೆ. ಅಲ್ಲದೇ ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಸುರ್ಜೆವಾಲಾ ಕೇಂದ್ರ ಸರ್ಕಾರವನ್ನು ಟೀಕಿಸಿದ್ದು, 72 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ದೇಶದ ರಾಜಧಾನಿ ದೆಹಲಿಯಲ್ಲಿ ಪೊಲೀಸರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ಭರವಸೆ ನೀಡಿದ್ದ ನವಭಾರತ ಇದೇನಾ? ದೇಶದ ಗೃಹಮಂತ್ರಿ ಅಮಿತ್ ಶಾ ಎಲ್ಲಿದ್ದಾರೆ? ಅವರು ಅವಿತು ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಟ್ವೀಟರ್ ನಲ್ಲಿ ಕಿಡಿಕಾರಿದ್ದಾರೆ.