ನವದೆಹಲಿ: ಮೆದುಳಿನ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕೊರೋನಾ ಸೋಂಕಿಗೆ ತುತ್ತಾಗಿದ್ದು, ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದೆ ಎನ್ನಲಾಗಿದೆ.
ಪ್ರಣಬ್ ಸೋಮವಾರ ಮೆದುಳಿಗೆ ಸಂಬಂಧಿಸಿದ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಅದಾದ ಬಳಿಕ ಅವರನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿತ್ತು. ಈ ವೇಳೆ ಅವರಿಗೆ ಸೋಂಕು ಇರುವುದು ದೃಢಪಟ್ಟಿತ್ತು.
ಸದ್ಯಕ್ಕೆ ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರಣಬ್ ಗೆ ಐಸಿಯು ಘಟಕದಲ್ಲಿ ವೆಂಟಿಲೇಟರ್ ಅಳವಡಿಸಲಾಗಿದ್ದು, ಯಾವುದೇ ಚೇತರಿಕೆಯ ಲಕ್ಷಣಗಳು ಕಂಡುಬರುತ್ತಿಲ್ಲ ಎನ್ನಲಾಗಿದೆ.