ಉತ್ತರ ಪ್ರದೇಶ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ನೇಮಕಗೊಂಡಿದ್ದ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರಿಗೆ ನೀಡಲಾದ ಜವಾಬ್ದಾರಿಯನ್ನು ಕಾಂಗ್ರೆಸ್ ಹಿಂದಕ್ಕೆ ಪಡೆಯುವ ಸಾಧ್ಯತೆಗಳಿವೆ.
ಮೂಲಗಳಿಂದ ಹರಿದು ಬಂದಿರುವ ಮಾಹಿತಿ ನಿಜವೆಂಬುದಾದರೆ, ಇತ್ತೀಚಿಗೆ ಕಿಶೋರ್ ಸಮಾಜವಾದಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಮತ್ತು ಅಮರ್ ಸಿಂಗ್ ಅವರನ್ನು ಭೇಟಿಯಾಗಿರುವುದು ಕಾಂಗ್ರೆಸ್ ನಾಯಕತ್ವಕ್ಕೆ ಅಸಮಧಾನ ತರಿಸಿದೆ.
'ಕೈ'ನ ಕಿಶೋರ್ ಮತ್ತು ಸಮಾಜವಾದಿ ನಾಯಕರ ಭೇಟಿ ಎರಡು ಪಕ್ಷಗಳ ನಡುವೆ ಮೈತ್ರಿಯ ಸಾಧ್ಯತೆಗಳನ್ನು ಹುಟ್ಟಿಹಾಕಿತ್ತು.
ಕಾಂಗ್ರೆಸ್ ಉಪಾಧ್ಯಕ್ಷರಾಗಿರುವ ರಾಹುಲ್ ಗಾಂಧಿಗೆ ಕಿಶೋರ್ ಪರಮಾಪ್ತರಾಗಿದ್ದು ಪಕ್ಷದ ಜತೆಗಿನ ಅವರ ಸಂಬಂಧ ಕೊನೆಗೊಳ್ಳುವುದು ಎಷ್ಟರ ಮಟ್ಟಿಗೆ ಸತ್ಯ ಎಂಬುದು ಸದ್ಯದಲ್ಲೇ ಗೊತ್ತಾಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ