Select Your Language

Notifications

webdunia
webdunia
webdunia
webdunia

ಜೆಡಿಯು ಪಕ್ಷದಿಂದ ಉಚ್ಚಾಟನೆಗೊಂಡ ಪ್ರಶಾಂತ್ ಕಿಶೋರ್ ಹಾಗೂ ಪವನ್ ವರ್ಮಾ

ಪವನ್ ವರ್ಮಾ
ಪಾಟ್ನಾ : ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ  ಪ್ರಶಾಂತ್ ಕಿಶೋರ್ ಹಾಗೂ ಬಂಡಾಯ ಶಾಸಕ ಪವನ್ ವರ್ಮಾ ಅವರನ್ನು ಪಕ್ಷ ವಿರೋಧಿ ಚಟುವಟಿಕೆಯ ಆರೋಪದಡಿ ಜೆಡಿಯು  ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ  ಪ್ರಶಾಂತ್ ಕಿಶೋರ್ ಜೆಡಿಯು ರಾಷ್ಟ್ರೀಯ ಅಧ್ಯಕ್ಷ, ಸಿಎಂ ನಿತೀಶ್ ಕುಮಾರ್ ಜೊತೆ ಸಿಎಎ ವಿಚಾರದಲ್ಲಿ  ಮನಸ್ತಾಪ ಹೊಂದಿದ್ದರು. ಹೀಗಾಗಿ ಅವರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದರು. ಈ ಹಿನ್ನಲೆಯಲ್ಲಿ  ಪ್ರಶಾಂತ್ ಕಿಶೋರ್ ಜೊತೆ ಬಂಡಾಯ ಶಾಸಕ ಪವನ್ ವರ್ಮಾ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

 

ಪ್ರಶಾಂತ್ ಕಿಶೋರ್ ಮತ್ತು ಪವನ್ ವರ್ಮಾ ಪಕ್ಷದ ನಿಯಮಗಳಿಗೆ ಯಾವುದೇ ಗೌರವ ನೀಡಲಿಲ್ಲ. ಹೀಗಾಗಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಹಾಗೂ ಇಬ್ಬರನ್ನೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಕಿತ್ತುಹಾಕಲಾಗಿದೆ ಎಂದು ಜೆಡಿಯು ಪ್ರಧಾನ ಕಾರ್ಯದರ್ಶಿ ಕೆ.ಸಿ.ತ್ಯಾಗಿ ಹೇಳಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ರತನ್ ಟಾಟಾ ಕಾಲಿಗೆ ಬಿದ್ದು ನಮಸ್ಕರಿಸಿದ ಇನ್ಪೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ