ನವದೆಹಲಿ : ಇಂದು ದೇಶದಾದ್ಯಂತ ಮುಸ್ಲಿಂ ಬಾಂಧವದವರು ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ದೇಶದ ನಾಯಕರಾದ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿ ಅನೇಕ ಗಣ್ಯರು ಮುಸ್ಲಿಂ ಬಾಂಧವದವರಿಗೆ ಶುಭ ಹಾರೈಸಿದ್ದಾರೆ.
'ಪ್ರೀತಿ, ಭ್ರಾತೃತ್ವ ಮತ್ತು ಮಾನವೀಯ ಸೇವೆಯನ್ನು ಈದ್ ಸಂಕೇತಿಸುತ್ತದೆ. ಈ ಸಂಸ್ಕೃತಿಯನ್ನು ಪ್ರತಿನಿಧಿಸುವ ಈ ಸಾರ್ವತ್ರಿಕ ಮೌಲ್ಯಗಳಿಗೆ ನಾವು ಬದ್ಧರಾಗಿರೋಣ' ಎಂದು ರಾಷ್ಟ್ರಪತಿ ಕೋವಿಂದ್ ಶುಭ ಕೋರಿದ್ದಾರೆ.