Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮುಝಾಫರ್ ನಗರ: 3 ನೇ ತರಗತಿಯ ಬಾಲಕಿಯ ಬಟ್ಟೆ ಬಿಚ್ಚಿಸಿ ಪ್ರಾಂಶುಪಾಲರೇ ಅತ್ಯಾಚಾರವೆಸಗಿದ ಘಟನೆ ಇಲ್ಲಿ ನಡೆದಿದೆ.
9 ವರ್ಷದ ಬಾಲಕಿ ಮೇಲೆ ಆಕೆಯ ತಾತನ ವಯಸ್ಸಿನ 71 ವರ್ಷದ ಪ್ರಿನ್ಸಿಪಾಲ್ ಅತ್ಯಾಚಾರವೆಸಗಿರುವುದು ನಗರದಲ್ಲಿ ತೀವ್ರ ಸಂಚಲನ ಉಂಟು ಮಾಡಿದೆ. ಇನ್ನು, ಈ ವಿಚಾರ ತಿಳಿದಿದ್ದರೂ ಮುಚ್ಚಿಟ್ಟಿದ್ದ ಇನ್ನೊಬ್ಬ ಶಿಕ್ಷಕನನ್ನೂ ಪೊಲೀಸರು ಬಂಧಿಸಿದ್ದಾರೆ.
ಶಾಲೆಯಿಂದ ಮನೆಗೆ ಬಂದ ಮೇಲೆ ಬಾಲಕಿ ರಕ್ತಸ್ರಾವ ಮತ್ತು ನೋವಿನಿಂದ ಬಳಲುತ್ತಿದ್ದಳು. ಪೋಷಕರು ಆಸ್ಪತ್ರೆಗೆ ಕರೆದೊಯ್ದಾಗ ಅತ್ಯಾಚಾರವಾಗಿರುವುದು ದೃಢಪಟ್ಟಿದೆ. ಈ ಸಂಬಂಧ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.