Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪ್ರಿಯಾಂಕ ಗಾಂಧಿ ಒಬ್ಬ ಮಾನಸಿಕ ಅಸ್ವಸ್ಥೆ ಎಂದ ಸುಬ್ರಮಣಿಯನ್ ಸ್ವಾಮಿ

ಪ್ರಿಯಾಂಕ ಗಾಂಧಿ ಒಬ್ಬ ಮಾನಸಿಕ ಅಸ್ವಸ್ಥೆ ಎಂದ ಸುಬ್ರಮಣಿಯನ್ ಸ್ವಾಮಿ
ನವದೆಹಲಿ , ಸೋಮವಾರ, 28 ಜನವರಿ 2019 (07:35 IST)
ನವದೆಹಲಿ : ಪ್ರಿಯಾಂಕ ಗಾಂಧಿ ಅವರು ಸಕ್ರಿಯ ರಾಜಕೀಯಕ್ಕೆ ಪ್ರವೇಶ ಮಾಡಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಪ್ರಿಯಾಂಕ ಗಾಂಧಿ ಒಬ್ಬ ಮಾನಸಿಕ ಅಸ್ವಸ್ಥೆ. ಆಕೆ ಜನರಿಗೆ ಹಿಂಸೆ ನೀಡಬಹುದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಪ್ರಿಯಾಂಕ ಗಾಂಧಿ ಬೈ ಪೊಲಾರಿಟಿ ಹೆಸರಿನ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇಂತಹ ಕಾಯಿಲೆ ಹೊಂದಿದವರಲ್ಲಿ ಹಿಂಸಾ ಪ್ರವೃತ್ತಿ ಇರುತ್ತದೆ. ಈ ಕಾಯಿಲೆ ಇರುವ ವ್ಯಕ್ತಿಗಳು ಜನರಿಗೆ ಹೊಡೆಯಬಹುದು. ಹೀಗಾಗಿ ಪ್ರಿಯಾಂಕಾ ಸಾರ್ವಜನಿಕ ಜೀವನಕ್ಕೆ ಯೋಗ್ಯರಲ್ಲ’ ಎಂದು ಹೇಳಿದ್ದಾರೆ.


ಹಾಗೇ ‘ಪ್ರಿಯಾಂಕ ಗಾಂಧಿ ಮಾನಸಿಕ ಸಮತೋಲನ ಕಳೆದುಕೊಳ್ಳುತ್ತಾರೆ ಎನ್ನುವ ಮಾಹಿತಿ ಸಾರ್ವಜನಿಕರಿಗೆ ತಿಳಿಯಬೇಕು. ಮರೆ ಮಾಚಿರುವ ಈ ಸತ್ಯ ಎಲ್ಲರಿಗೂ ಗೊತ್ತಾಗಬೇಕು’ ಎಂದು ಅವರು ವ್ಯಂಗ್ಯವಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಹಿಂದೂ ಹುಡುಗಿಯ ಕೈ ಮುಟ್ಟಿದರೆ ಆ ಕೈ ಇರಬಾರದು- ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ