ಮುಂಬರುವ ವರ್ಷದ ಆರಂಭದಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ಪಕ್ಷದ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಿಯಾಂಕಾ ಗಾಂಧಿ ಪಕ್ಷದ ಪರವಾಗಿ ಪ್ರಚಾರ ಮಾಡಿದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಸಂತೋಷವಾಗುತ್ತದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಪ್ರಿಯಾಂಕಾ ಗಾಂಧಿ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಬೇಕೋ ಅಥವಾ ಬೇಡವೋ ಎನ್ನುವ ನಿರ್ಧಾರ ಅಂತಿಮವಾಗಿ ಪ್ರಿಯಾಂಕಾ ಅವರದ್ದಾಗಿರುತ್ತದೆ ಎಂದು ಮತ್ತೊಬ್ಬ ಕಾಂಗ್ರೆಸ್ ನಾಯಕ ಮಣಿ ಶಂಕರ್ ಅಯ್ಯರ್ ತಿಳಿಸಿದ್ದಾರೆ.
ಉತ್ತರಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸಂಪೂರ್ಣವಾಗಿ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷ ರಾಜ್ಬಬ್ಬರ್ ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ