Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮುಂಬೈ : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಡೆಸಿರುವ ಪ್ರತಿಭಟನೆ ವೇಳೆ ಕೆಲ ಪ್ರತಿಭಟನಾಕಾರರು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆಗಳನ್ನು ಕೂಗಿರುವ ಘಟನೆ ಶುಕ್ರವಾರ ಪುಣೆಯಲ್ಲಿ ನಡೆದಿದೆ.
ಇದರ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿಯೂ ಕಾಣಿಸಿಕೊಂಡಿದ್ದು, ಈ ಹಿನ್ನೆಲೆ ಮಹಾರಾಷ್ಟ್ರದ ಕೆಲ ಬಿಜೆಪಿ ನಾಯಕರು ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಪಿಎಫ್ಐ ಸಂಘಟನೆಯ ಮೇಲೆ ರಾಷ್ಟ್ರವ್ಯಾಪಿಯಾಗಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಇದನ್ನು ಖಂಡಿಸಿ ಪಿಎಫ್ಐ ಕಾರ್ಯಕರ್ತರು ಶುಕ್ರವಾರ ಪುಣೆ ನಗರದ ಜಿಲ್ಲಾಧಿಕಾರಿ ಕಚೇರಿಯ ಹೊರಗಡೆ ಪ್ರತಿಭಟನೆಯನ್ನು ಆಯೋಜಿಸಿದ್ದರು.
ಪ್ರತಿಭಟನೆಯ ವೇಳೆ ಸುಮಾರು 40 ಜನರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪೊಲೀಸರು ಪ್ರತಿಭಟನಾಕಾರರನ್ನು ತಮ್ಮ ವಾಹನದಲ್ಲಿ ಕೂರಿಸುವಾಗ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆಯನ್ನು ಕೂಗಿದ್ದಾರೆ.