Webdunia - Bharat's app for daily news and videos

Install App

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯನ್ನು ಟೀಕಿಸಿದಕ್ಕೆ ಫ್ರೊಫೆಸರ್ ಗೆ ಬಿತ್ತು ಗೂಸಾ

Webdunia
ಭಾನುವಾರ, 19 ಆಗಸ್ಟ್ 2018 (07:28 IST)
ಪಾಟ್ನಾ : ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಬಗ್ಗೆ ಟೀಕಿಸಿದಕ್ಕೆ ಫ್ರೊಫೆಸರ್ ಒಬ್ಬರ ಮೇಲೆ 20-25 ಜನರ ಗುಂಪು ಹಲ್ಲೆ ಮಾಡಿದ ಘಟನೆ ಬಿಹಾರದಲ್ಲಿ ನಡೆದಿದೆ.


ಬಿಹಾರದ ಮೋತಿಹಾರಿಯಲ್ಲಿರುವ ಮಹಾತ್ಮಾ ಗಾಂಧಿ ಸೆಂಟ್ರಲ್ ಯೂನಿವರ್ಸಿಟಿಯ ಫ್ರೊಫೆಸರ್ ರಾದ  ಸಂಜಯ್ ಕುಮಾರ್ ಎಂಬುವವರು ಫೇಸ್ ಬುಕ್ ನಲ್ಲಿ ವಾಜಪೇಯಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಳಿಕ 20-25 ಜನರು ಗುಂಪು ಕಟ್ಟಿಕೊಂಡು ಬಂದು ಸಂಜಯ್ ಮೇಲೆ ಹಲ್ಲೆ ನಡೆಸಿದ್ದಾರೆ.


ಫ್ರೊಫೆಸರ್ ಸಂಜಯ್ ಕುಮಾರ್ ಅವರು ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದ್ದು, ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 12 ಜನರನ್ನು ಬಂಧಿಸಿದ್ದಾರೆ. ಸಂಜಯ್ ಕುಮಾರ್ ಅವರಿಗೆ ಗಂಭೀರ ಗಾಯಗಳಾಗಿದ್ದು ಪಾಟ್ನಾದ ವೈದ್ಯಕೀಯ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments