ಬೆಂಗಳೂರು : ಜನವರಿ ತಿಂಗಳ ಸಂಕ್ರಾಂತಿ ದಿನವೇ 2023ರ ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಪ್ರಕಟಿಸಿದರು.
ಜನತಾ ಪರ್ವ 1.ಔ ಹಾಗೂ ಮಿಷನ್ 123 ಗುರಿಯೊಂದಿಗೆ ಬಿಡದಿಯ ತಮ್ಮ ತೋಟದಲ್ಲಿ ಹ್ಮಮಿಕೊಂಡಿದ್ದ 4 ದಿನಗಳ ಕಾರ್ಯಾಗಾರದ 2ನೇ ದಿನದ ಕೊನೆಯಲ್ಲಿ ಮಾಧ್ಯಮಗಳ ಜತೆ ಮಾತನಾಡುತ್ತಾ ಈ ವಿಷಯ ತಿಳಿಸಿದರು.
ಇಂದಿನ ಕಾರ್ಯಾಗಾರದಲ್ಲಿ ಮುಂದಿನ ಅಭ್ಯರ್ಥಿಗಳಿಗೆ 30 ಅಂಶಗಳ ಅಜೆಂಡಾ ನೀಡಿದ್ದೇವೆ. ಆ ಅಜೆಂಡಾ ಪ್ರಕಾರ ಅವರು ಕೆಲಸ ಮಾಡಿ ತೋರಿಸಬೇಕು. ಅವರೆಲ್ಲರೂ 3 ತಿಂಗಳಲ್ಲಿ ಈ ಕಾರ್ಯಕ್ರಮ ಅನುಷ್ಠಾನ ಮಾಡಬೇಕು. ಯಶಸ್ವಿಯಾಗಿ ಅನುಷ್ಠಾನ ಮಾಡುವ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಲಾಗುವುದು ಎಂದರು ಅವರು. ನಿಗದಿತ ಅವಧಿಯೊಳಗೆ ಈ ಅಜೆಂಡಾವನ್ನು ಗ್ರಾಮ ಪಂಚಾಯ್ತಿ ಮಟ್ಟಕ್ಕೆ ಅನುಷ್ಠಾನ ಮಾಡಲೇಬೇಕು ಹಾಗೂ ಇದನ್ನು ಪರಿವೇಕ್ಷಣೆ ಮಾಡಲು ವಿಶೇಷ ತಂಡವನ್ನು ರಚನೆ ಮಾಡಲಾಗಿದೆ. ಪ್ರತಿನಿತ್ಯ ಇದರ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದು ಅವರು ಮಾಹಿತಿ ನೀಡಿದರು.