Publish Date: Thu, 16 May 2019 (09:59 IST)
Updated Date: Thu, 16 May 2019 (10:01 IST)
ನವದೆಹಲಿ: ಪುಲ್ವಾಮಾದಲ್ಲಿ ಮತ್ತೆ ಉಗ್ರರು ಮತ್ತು ಭಾರತೀಯ ಸೇನೆ ನಡುವೆ ಗುಂಡಿನ ಕಾಳಗ ನಡೆದಿದ್ದು, ಮೂವರು ನರಹಂತಕರನ್ನು ಭಾರತೀಯ ಸೈನಿಕರು ಹತ್ಯೆ ಮಾಡಿದ್ದಾರೆ.
ಪುಲ್ವಾಮದ ದಲಿಪೊರಾ ಏರಿಯಾದಲ್ಲಿ ಈ ಗುಂಡಿನ ಚಕಮಕಿ ನಡೆದಿದೆ. ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿದ ಸೈನಿಕರು ಮೂವರನ್ನು ಹೊಡೆದುರುಳಿಸಿದ್ದಾರೆ. ಓರ್ವ ಯೋಧ ಹುತಾತ್ಮನಾಗಿದ್ದಾರೆ. ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಭಾರತೀಯ ಸೇನೆ ಹೇಳಿದೆ.
ಕಣಿವೆ ರಾಜ್ಯದಲ್ಲಿ ಉಗ್ರರ ದಮನ ಕಾರ್ಯಾಚರಣೆ ನಡೆಸುತ್ತಿರುವ ಸೈನಿಕರು ನಿರಂತರವಾಗಿ ಉಗ್ರರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ