ಉತ್ತರಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲನುಭವಿಸಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಪಂಜಾಬ್ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಸಂತಸ ತಂದಿದೆ. ಗೋವಾ, ಮಣಿಪುರ ರಾಜ್ಯದಲ್ಲೂ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವುದು ಸಮಾಧಾನ ತಂದಿದೆ ಎಂದು ತಿಳಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ಗೋವಾ, ಮಣಿಪುರ ರಾಜ್ಯದಲ್ಲಿ ಜನತೆಯ ಆದೇಶವನ್ನು ತಿರಸ್ಕರಿಸಿ, ಅಧಿಕಾರ ದಾಹದಿಂದ ಸರಕಾರ ರಚಿಸಲು ಮುಂದಾಗಿದೆ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಪಕ್ಷದಲ್ಲಿ ಮತ್ತಷ್ಟು ಸಂಘಟನೆಯ ಅಗತ್ಯವಾಗಿದೆ. ಪಕ್ಷವನ್ನು ಮತ್ತಷ್ಟು ಸಂಘಟಿಸುವ ಮೂಲಕ ಕೇಂದ್ರದಲ್ಲಿ ಅಧಿಕಾರಕ್ಕೆ ತರಬೇಕಾಗಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.