Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ರಚಿಸಿ ಟೀಕೆಗೆ ಗುರಿಯಾದ ರಾಹುಲ್ ಗಾಂಧಿ!

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ರಚಿಸಿ ಟೀಕೆಗೆ ಗುರಿಯಾದ ರಾಹುಲ್ ಗಾಂಧಿ!
ನವದೆಹಲಿ , ಬುಧವಾರ, 18 ಜುಲೈ 2018 (12:05 IST)
ನವದೆಹಲಿ : ಕಾಂಗ್ರೆಸ್ ಪಕ್ಷ ಮಹತ್ವದ ನಿರ್ಧಾರ ಕೈಗೊಳ್ಳಲು ಮಂಗಳವಾರ ಕಾರ್ಯಕಾರಿ ಸಮಿತಿ ರಚಿಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇದೀಗ ಟೀಕೆಗೆ ಗುರಿಯಾಗಿದ್ದಾರೆ.

ಅಧ್ಯಕ್ಷ ರಾಹುಲ್ ಗಾಂಧಿ ಮಂಗಳವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ರಚಿಸಿ ಅದರಲ್ಲಿ ಅನುಭವಿ ಹಾಗೂ ಯುವ ನಾಯಕರಿಗೆ ಸ್ಥಾನ ನೀಡಿದ್ದಾರೆ. ಆದರೆ ರಚನೆಯಾದ ಕಾಂಗ್ರೆಸ್ ವರ್ಕಿಂಗ್ ಕಮಿಟಿಯಲ್ಲಿರುವ 51 ಜನ ಸದಸ್ಯರಲ್ಲಿ ಕೇವಲ 7 ಸ್ಥಾನವನ್ನು  ಮಹಿಳೆಯರಿಗೆ ನೀಡಿದ್ದಾರೆ. ಇದರಿಂದ ಇದೀಗ ರಾಹುಲ್ ಗಾಂಧಿ ಟೀಕೆಗೆ ಗುರಿಯಾಗಿದ್ದಾರೆ.

 

ಯಾಕೆಂದರೆ ಮುಂಗಾರು ಅಧಿವೇಶನದಲ್ಲಿ ಸಂಸತ್ತಿನಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡುವ ಕುರಿತಂತೆ ಇರುವ ಮಹಿಳಾ ಮೀಸಲಾತಿ ವಿಧೇಯಕವನ್ನು ಮಂಡಿಸಬೇಕು ಎಂದು ಇತ್ತೀಚೆಗಷ್ಟೇ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಆದರೆ ಕಾಂಗ್ರೆಸ್ ವರ್ಕಿಂಗ್ ಕಮಿಟಿಯಲ್ಲಿ ಕೇವಲ 15% ಮಹಿಳೆಯರಿಗಷ್ಟೇ ಸ್ಥಾನ ನೀಡಿದ್ದು, ಈ ಕಾರಣಕ್ಕೆ ಈಗ ರಾಹುಲ್ ಗಾಂಧಿ ಲೇವಡಿಗೆ ಒಳಗಾಗಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 


Share this Story:

Follow Webdunia kannada

ಮುಂದಿನ ಸುದ್ದಿ

ಅಮೇರಿಕಾದ ವಿರುದ್ಧ ಇರಾನ್ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದೂರು ನೀಡಲು ಕಾರಣವೇನು?