ನವದೆಹಲಿ : ಬಿಜೆಪಿ ಕೊರೊನಾ ವಿಚಾರದಲ್ಲಿ ಸುಳ್ಳು ಹೇಳುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಬಿಜೆಪಿ ಸುಳ್ಳನ್ನು ಸತ್ಯವೆಂದು ಹೇಳುತ್ತಿದೆ. ಈ ಭ್ರಮೆ ಶೀಘ್ರದಲ್ಲೇ ಬಯಲಾಗಲಿದ್ದು, ಭಾರತ ಇದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಹಾಗೇ ಬಿಜೆಪಿ ಕೊರೊನಾ ವೈರಸ್ ಕುರಿತು ತಪ್ಪು ಅಂಕಿ ಅಂಶಗಳನ್ನು ನೀಡುತ್ತಿದೆ. ಪರೀಕ್ಷೆಗಳನ್ನು ಹೆಚ್ಚು ನಡೆಸುತ್ತಿಲ್ಲ. ಅಲ್ಲದೇ ಸಾವಿನ ಸಂಖ್ಯೆಯ ವರದಿಯನ್ನು ಸಹ ತಪ್ಪಾಗಿ ನೀಡುತ್ತಿದೆ ಎಂದು ಆರೋಪಿಸಿದ್ದಾರೆ.