ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಪ್ರದರ್ಶನ ಹಿನ್ನಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡುವುದು ಬಹುತೇಕ ಪಕ್ಕಾ ಆಗಿದೆ.
ಫಲಿತಾಂಶದ ಬಳಿಕ ನಡೆದ ಮೊದಲ ಕಾರ್ಯಾಕಾರಿ ಸಭೆಯಲ್ಲಿ ರಾಹುಲ್ ಗಾಂಧಿ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಸದ್ಯಕ್ಕೆ ಬೇಡ ಎಂದು ತೀರ್ಮಾನಕ್ಕೆ ಬರಲಾಯಿತು. ಈ ಸಭೆಯಲ್ಲಿ ತಮಗೆ ಪಕ್ಷದ ಹಿರಿಯ ನಾಯಕರು ಬೆಂಬಲ ಕೊಡಲಿಲ್ಲ ಎಂದು ರಾಹುಲ್ ಸಿಟ್ಟಾಗಿದ್ದರು ಎನ್ನಲಾಗಿದೆ.
ಆದರೆ ಇಷ್ಟಕ್ಕೇ ಸುಮ್ಮನಾಗದ ರಾಹುಲ್ ಇದೀಗ ಪಕ್ಷದ ಚುಕ್ಕಾಣಿಯನ್ನು ಹಿರಿಯ ನಾಯಕರಿಗೆ ವಹಿಸಲು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಇನ್ನು ನಾಲ್ಕು ದಿನದಲ್ಲಿ ಮತ್ತೆ ಕಾರ್ಯಕಾರಿ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ರಾಹುಲ್ ರಾಜೀನಾಮೆ ನೀಡುವುದು ಪಕ್ಕಾ ಎನ್ನಲಾಗಿದೆ.