ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ನಡೆದ ಆಂತರಿಕ ಚುನಾವಣೆಗೆ ಏಕೈಕ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ರಾಹುಲ್ ಗಾಂಧಿಯನ್ನು ಇಂದೇ ಅಧ್ಯಕ್ಷರಾಗಿ ಘೋಷಿಸುವ ಸಾಧ್ಯತೆಯಿದೆ.
ಈ ಮೊದಲು ನಿಗದಿಯಾದಂತೆ ರಾಹುಲ್ ಗಾಂಧಿಯನ್ನು ಅಧ್ಯಕ್ಷರಾಗಿ ಅಧಿಕೃತವಾಗಿ ಪಕ್ಷ ಘೋಷಣೆ ಮಾಡುವ ಸಾಧ್ಯತೆಯಿದೆ. ಹಾಗಿದ್ದರೂ ಅಧಿಕೃತವಾಗಿ ರಾಹುಲ್ ಡಿಸೆಂಬರ್ 16 ರಂದು ಅಧಿಕಾರ ಸ್ವೀಕರಿಸಿದ್ದಾರೆ.
ಕಳೆದ ತಿಂಗಳು ರಾಹುಲ್ ಗಾಂಧಿಯನ್ನು ಅಧ್ಯಕ್ಷ ಸ್ಥಾನಕ್ಕೆ ಬಡ್ತಿ ನೀಡುವ ಬಗ್ಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಿರ್ಣಯವೊಂದನ್ನು ಕೈಗೊಂಡಿತ್ತು. ಹಾಗಿದ್ದರೂ ಆಂತರಿಕ ಚುನಾವಣೆ ದಿನಾಂಕ ಘೋಷಿಸಲಾಗಿತ್ತು. ಆದರೆ ರಾಹುಲ್ ಹೊರತಾಗಿ ಯಾವುದೇ ಅಭ್ಯರ್ಥಿ ನಾಮಪತ್ರ ಸಲ್ಲಿಸದ ಕಾರಣ ಇಂದೇ ಅವರನ್ನು ಅಧ್ಯಕ್ಷರೆಂದು ಘೋಷಿಸುವ ಸಾಧ್ಯತೆಯಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ