ನವದೆಹಲಿ: ಮತಗಳ್ಳತನದ ಬಗ್ಗೆ ಸದ್ಯದಲ್ಲೇ ಹೈಡ್ರೋಜನ್ ಬಾಂಬ್ ಹಾಕಲಿದ್ದೇನೆ ಎಂದಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಬಿಹಾರ ಚುನಾವಣೆಯಲ್ಲಿ ಮತಗಳ್ಳತನ ವಿಚಾರವನ್ನೇ ಅಸ್ತ್ರ ಮಾಡಿಕೊಂಡಿದ್ದ ರಾಹುಲ್ ಗಾಂಧಿ ಅದರಲ್ಲಿ ತಕ್ಕಮಟ್ಟಿಗೆ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಮೊದಲು ಮತಗಳ್ಳತನದ ಬಗ್ಗೆ ವೋಟರ್ ಲಿಸ್ಟ್ ಬಿಡುಗಡೆ ಮಾಡಿ ಚುನಾವಣಾ ಆಯೋಗದ ಕೆಂಗಣ್ಣಿಗೆ ಗುರಿಯಾಗಿದ್ದರು.
ಇಂದು ಬೆಳಿಗ್ಗೆ 10 ಗಂಟೆಗೆ ರಾಹುಲ್ ಗಾಂಧಿ ವಿಶೇಷ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ ಮತಗಳ್ಳತನದ ಬಗ್ಗೆ ಅವರು ಮಾತನಾಡುವುದು ಬಹುತೇಕ ಖಚಿತವಾಗುತ್ತಿದೆ. ಅವರು ಯಾವ ವಿಚಾರದ ಬಗ್ಗೆ ಮಾತನಾಡಲಿದ್ದಾರೆ ಎಂಬ ಕುತೂಹಲವಿದೆ.
ರಾಹುಲ್ ಸುದ್ದಿಗೋಷ್ಠಿ ಕುರಿತು ಕಾಂಗ್ರೆಸ್ ನಾಯಕ ಪವನ್ ಖೇರಾ ಟ್ವೀಟ್ ಮಾಡಿದ್ದಾರೆ. ಆದರೆ ಯಾವ ವಿಷಯದ ಬಗ್ಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿಲ್ಲ.