Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪ್ರಧಾನಿ ಮೋದಿ ಅಡಳಿತ ವೈಫಲ್ಯವನ್ನು ಒಪ್ಪಿಕೊಳ್ಳಲಿ: ರಾಹುಲ್ ಗಾಂಧಿ

ಪ್ರಧಾನಿ ಮೋದಿ ಅಡಳಿತ ವೈಫಲ್ಯವನ್ನು ಒಪ್ಪಿಕೊಳ್ಳಲಿ: ರಾಹುಲ್ ಗಾಂಧಿ
ಅಮೇಥಿ , ಗುರುವಾರ, 5 ಅಕ್ಟೋಬರ್ 2017 (19:35 IST)
ಕೇಂದ್ರ ಸರಕಾರದ ವೈಫಲ್ಯಕ್ಕೆ ಪ್ರಧಾನಿ ಮೋದಿ ಇತರರನ್ನು ದೂಷಿಸುವ ಬದಲಿಗೆ ತಮ್ಮ ವೈಫಲ್ಯವನ್ನು ಒಪ್ಪಿಕೊಳ್ಳಬೇಕು ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.   
ಕಳೆದ ಎರಡು ತ್ರೈಮಾಸಿಕಗಳಲ್ಲಿ ಆರ್ಥಿಕ ಕುಸಿತದ ಬಗ್ಗೆ ಉಹಾಪೋಹ ವರದಿಗಳು ಹರಡಿರುವುದನ್ನು ಪ್ರಸ್ತಾಪಿಸಿದ ವಿಪಕ್ಷಗಳ ವಿರುದ್ಧ ಕಿಡಿಕಾರಿದ ಪ್ರಧಾನಿ ಮೋದಿ, ಯುಪಿಎ ಸರಕಾರದ ಅವಧಿಯಲ್ಲಿ ದೇಶದ ಆರ್ಥಿಕತೆ ಶೇ.2.5 ರಷ್ಟು ಕುಸಿದಿತ್ತು ಎಂದು ತಿರುಗೇಟು ನೀಡಿದ್ದರು.   
 
ಮೋದಿ ಸರ್ಕಾರ ಕೇಂದ್ರೀಕರಿಸಬೇಕಾದ ಎರಡು ಮುಖ್ಯ ವಿಷಯಗಳೆಂದರೆ ಉದ್ಯೋಗ ಸೃಷ್ಟಿ ಮತ್ತು ರೈತರ ಸಂಕಷ್ಟಗಳು ಪರಿಹರಿಸಬೇಕಾಗಿದೆ. ಪ್ರತಿಪಕ್ಷ ನಾಯಕನಾಗಿ, ಎರಡೂ ಸಮಸ್ಯೆಗಳ ಬಗ್ಗೆ ಗಮನಹರಿಸುವಂತೆ ಪ್ರಧಾನಿ ಮೋದಿಗೆ ಸಲಹೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.
 
ನಮ್ಮ ಯುವಜನರಿಗೆ ಉದ್ಯೋಗ ನೀಡಲು ನಮಗೆ ಸಾಧ್ಯವಾಗುತ್ತಿಲ್ಲ. ಆದರೆ, ಚೀನಾ ಪ್ರತಿ ದಿನ 50,000 ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ. ಆದರೆ ಭಾರತ, ಸ್ಟಾರ್ಟ್ಅಪ್ ಇಂಡಿಯಾ, ಸ್ಟ್ಯಾಂಡ್ ಅಪ್ ಇಂಡಿಯಾ, ಅಡಿಯಲ್ಲಿ 450 ಉದ್ಯೋಗಗಳನ್ನು ಸೃಷ್ಟಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಕೃಷಿ ಕ್ಷೇತ್ರದಲ್ಲಿನ ಸಮಸ್ಯೆಗಳಿಂದಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.ಪ್ರಧಾನಿ ಮೋದಿ ಇತರರನ್ನು ದೂಷಿಸುವ ಮೊದಲು ತಮ್ಮ ಸರಕಾರದ ವೈಫಲ್ಯವನ್ನು ಒಪ್ಪಿಕೊಳ್ಳಬೇಕು ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಎಸ್‌ಎಫ್‌ ಪಡೆಗಳಿಂದ ಪಾಕಿಸ್ತಾನದ ಮಹಿಳಾ ಭಯೋತ್ಪಾದಕಿ ಹತ್ಯೆ