Webdunia - Bharat's app for daily news and videos

Install App

ಮಾರ್ಷಲ್ ಆರ್ಟ್ಸ್ ಕಲಿಸುತ್ತಿರುವ ವಿಡಿಯೋ ಹಂಚಿಕೊಂಡ ರಾಹುಲ್ ಗಾಂಧಿ

Krishnaveni K
ಶುಕ್ರವಾರ, 30 ಆಗಸ್ಟ್ 2024 (11:38 IST)
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾರ್ಷಲ್ ಆರ್ಟ್ಸ್ ಕಲಿಸುತ್ತಿರುವ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಾಷ್ಟ್ರೀಯ ಕ್ರೀಡಾದಿನವಾದ ನಿನ್ನೆ ರಾಹುಲ್ ಗಾಂಧಿ ಭಾರತ್ ಝೋಡೋ ಯಾತ್ರೆ ವೇಳೆ ತಾವು ಮಾರ್ಷಲ್ ಆರ್ಟ್ಸ್ ಕಲಿಸುತ್ತಿದ್ದ ವಿಚಾರವನ್ನು ಹೇಳಿಕೊಂಡಿದ್ದಲ್ಲದೆ, ಆ ದಿನಗಳ ವಿಡಿಯೋವನ್ನೂ ಹಂಚಿಕೊಂಡಿದ್ದಾರೆ. ಇದು ನಮ್ಮ ದೈನಂದಿನ ದಿನಚರಿಯಾಗಿತ್ತು ಎಂದು ರಾಹುಲ್ ಹೇಳಿಕೊಂಡಿದ್ದಾರೆ.

ಭಾರತ್ ಝೋಡೋ ಯಾತ್ರೆ ಸಂದರ್ಭದಲ್ಲಿ ನಾವು ಎಲ್ಲಿ ಇರುತ್ತೇವೋ ಅಲ್ಲಿ ಸಂಜೆ ನಮ್ಮದು ಈ ದಿನಚರಿ ಇರುತ್ತಿತ್ತು ಎಂದಿದ್ದಾರೆ. ರಾಹುಲ್ ಗಾಂಧಿ ತಾವು ಐಕಿಡೋದಲ್ಲಿ ಬ್ಲ್ಯಾಕ್ ಬೆಲ್ಟ್ ಮತ್ತು ಜು-ಜಿತ್ಸುವಿನಲ್ಲಿ ಬ್ಲೂ ಬೆಲ್ಟ್ ಪಡೆದಿರುವುದಾಗಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಯುವಕರಿಗೆ ಇಂತಹ ಸಮರ ಕಲೆಗಳನ್ನು ಕಲಿಸುವುದು, ಅಹಿಂಸಾತ್ಮಕ ತಂತ್ರಗಾರಿಕೆಯನ್ನು ಕಲಿಸುವುದು ನಮ್ಮ ಉದ್ದೇಶವಾಗಿತ್ತು.  ಹಿಂಸೆ ಬಿಟ್ಟು ಅಹಿಂಸಾತ್ಮಕವಾಗಿ ನಮ್ಮನ್ನು ರಕ್ಷಿಸಿಕೊಳ್ಳುವ ಕಲೆಗಾರಿಕೆ ಕಲಿಸಿ ಸಮಾಜದ ಹಿತ ಕಾಯುವುದು ನಮ್ಮ ಉದ್ದೇಶವಾಗಿತ್ತು ಎಂದು ರಾಹುಲ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments