Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸಂಸತ್ತಿನಲ್ಲಿ ಮೋದಿಗೆ ಶೇಕ್ ಹ್ಯಾಂಡ್ ಮಾಡಿದ ರಾಹುಲ್ ಗಾಂಧಿ

ಸಂಸತ್ತಿನಲ್ಲಿ ಮೋದಿಗೆ ಶೇಕ್ ಹ್ಯಾಂಡ್ ಮಾಡಿದ ರಾಹುಲ್ ಗಾಂಧಿ

Sampriya

ನವದೆಹಲಿ , ಬುಧವಾರ, 26 ಜೂನ್ 2024 (14:58 IST)
Photo Courtesy X
ನವದೆಹಲಿ:  18 ನೇ ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾದ ಓಂ ಬಿರ್ಲಾ ಅವರಿಗೆ ಶುಭಕೋರಿ, ಸ್ವಾಗತಿಸುವ ವೇಳೆ  ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪರಸ್ಪರ ಹಸ್ತಲಾಘವ ಮಾಡುವ ಮೂಲಕ ಗನಮ ಸೆಳೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಓಂ ಬಿರ್ಲಾ ಅವರನ್ನು  ಸ್ಪೀಕರ್ ಆಗಿ ಆಯ್ಕೆ ಮಾಡುವ ಪ್ರಸ್ತಾವನೆಯನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದರು.

ಘೋಷಣೆಯ ನಂತರ, ಪ್ರಧಾನಿ ಮೋದಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು  ಬಿರ್ಲಾ ಅವರನ್ನು ಸ್ಕೀಕರ್ ಕುರ್ಚಿಗೆ ಕರೆದೊಯ್ಯಲು ಮುಂದಾದರು. ಅವರೊಂದಿಗೆ ರಾಹುಲ್ ಗಾಂಧಿ ಕೂಡ ಬಿರ್ಲಾ ಅವರನ್ನು ಅಭಿನಂದಿಸಿದರು.

 ಎರಡನೇ ಬಾರಿಗೆ ಈ ಸ್ಪೀಕರ್ ಆಗಿ ಆಯ್ಕೆಯಾಗಿರುವುದು ಗೌರವದ ವಿಷಯ ಎಂದು ಬಿರ್ಲಾ ಅವರನ್ನು ಅಭಿನಂದಿಸಿದ ಪ್ರಧಾನಿ ಮೋದಿ ಹೇಳಿದರು. "ನಾನು ಇಡೀ ಸದನದ ಪರವಾಗಿ ನಿಮ್ಮನ್ನು ಅಭಿನಂದಿಸುತ್ತೇನೆ ಮತ್ತು ಮುಂದಿನ ಐದು ವರ್ಷಗಳವರೆಗೆ ನಿಮ್ಮ ಮಾರ್ಗದರ್ಶನಕ್ಕಾಗಿ ಎದುರು ನೋಡುತ್ತಿದ್ದೇನೆ. ನಿಮ್ಮ ಸಿಹಿ ನಗು ಇಡೀ ಸದನವನ್ನು ಸಂತೋಷವಾಗಿರಿಸುತ್ತದೆ." ಎಂದರು.

ಇಡೀ ವಿರೋಧ ಪಕ್ಷ ಮತ್ತು ಭಾರತ ಮೈತ್ರಿಕೂಟದ ಪರವಾಗಿ ನಾನು ನಿಮ್ಮನ್ನು ಅಭಿನಂದಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದರು. "ನೀವು ಜನರ ಧ್ವನಿಯ ಅಂತಿಮ ತೀರ್ಪುಗಾರರು. ಸರ್ಕಾರಕ್ಕೆ ರಾಜಕೀಯ ಶಕ್ತಿ ಇರಬಹುದು, ಆದರೆ ಪ್ರತಿಪಕ್ಷವು ಜನರ ಧ್ವನಿಯನ್ನು ಪ್ರತಿನಿಧಿಸುತ್ತದೆ. ನಿಮ್ಮ ಕೆಲಸದಲ್ಲಿ ಪ್ರತಿಪಕ್ಷಗಳು ನಿಮಗೆ ಸಹಾಯ ಮಾಡಲು ಬಯಸುತ್ತವೆ, ಸದನದಲ್ಲಿ ಮಾತನಾಡಲು ನೀವು ನಮಗೆ ಅವಕಾಶ ನೀಡುತ್ತೀರಿ ಎಂದು ನನಗೆ ವಿಶ್ವಾಸವಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಹಾಲಿನ ದರ ಇನ್ನೂ ಜಾಸ್ತಿ ಮಾಡಬೇಕಿತ್ತು: ಡಿಕೆ ಶಿವಕುಮಾರ್