Publish Date: Mon, 28 Dec 2020 (09:59 IST)
Updated Date: Mon, 28 Dec 2020 (10:00 IST)
ನವದೆಹಲಿ: ವೈಯಕ್ತಿಕ ಕಾರಣಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಕಾಂಗ್ರೆಸ್ ಸಂಸ್ಥಾಪನಾ ದಿವಸ್ ಸಂದರ್ಭದಲ್ಲೇ ರಾಹುಲ್ ಈ ಪ್ರವಾಸ ಮಾಡಿದ್ದಾರೆ.
ಈ ಬಗ್ಗೆ ಅವರ ವಕ್ತಾರರು ಹೇಳಿಕೆ ಬಿಡುಗಡೆ ಮಾಡಿದ್ದು ರಾಹುಲ್ ಗಾಂಧಿ ತಮ್ಮ ವೈಯಕ್ತಿಕ ಕಾರಣಗಳಿಗಾಗಿ ಕೆಲವು ದಿನಗಳ ಮಟ್ಟಿಗೆ ವಿದೇಶ ಪ್ರವಾಸಕ್ಕೆ ತೆರಳಲಿದ್ದಾರೆ. ಕೆಲವು ದಿನಗಳ ಬಳಿಕ ಮರಳಲಿದ್ದಾರೆ ಎಂದಿದ್ದಾರೆ. ಒಂದೆಡೆ ಛತ್ತೀಸ್ ಘಡ, ರಾಜಸ್ಥಾನ್ ನಲ್ಲಿ ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು, ಕಾಂಗ್ರೆಸ್ ಸಂಸ್ಥಾಪನಾ ದಿವಸ್ ನಂತಹ ಕಾರ್ಯಕ್ರಮಗಳನ್ನು ಬಿಟ್ಟು ರಾಹುಲ್ ದಿಡೀರ್ ಆಗಿ ರಜೆಯಲ್ಲಿ ತೆರಳಿರುವುದು ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಟೀಕೆಗೆ ಗುರಿಯಾಗಿದೆ.